Read - 2 minutes


ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ವರಿಷ್ಠರು ಎಸ್.ಎನ್. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಿದ್ದಾರೆ. ನಾನು ಪಕ್ಷದ ತೀರ್ಮಾನಕ್ಕೆ ಬದ್ದನಾಗಿದ್ದೇನೆ. ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ. ಚನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರ ಹಾಗೂ ಟಿಕೆಟ್ ಆಕಾಂಕ್ಷಿಯಾಗಿದ್ದಕ್ಕೆ ಕೆ.ಈ. ಕಾಂತೇಶ್ ಗೆ ಅವನ ಕಾರ್ಯವೈಖರಿ ನೋಡಿ ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನಮಾನ ಕೊಡುವ ಬಗ್ಗೆ ನಿರ್ಧಾರ ಮಾಡುತ್ತದೆ. ಇವತ್ತಿಗೆ ಇದು ಮುಗಿದು ಹೋಗಿಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಮಾಡಿರುತ್ತಾರೆ ಎಂದರು.
ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ ಆಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಸಿದ್ದಾಂತ ಮೆಚ್ಚಿ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು.
Also read: ‘ಸುಳಿ’ ಚಲನಚಿತ್ರಕ್ಕೆ ಮುಹೂರ್ತ ಸಮಾರಂಭ
Discussion about this post