ಕಲ್ಪ ಮೀಡಿಯಾ ಹೌಸ್ | ಸಾಗರ |
ಇಲ್ಲಿನ ಶ್ರೀ ಕ್ಷೇತ್ರ ಸಿಗಂಧೂರು ಬಳಿಯಲ್ಲಿ ಪ್ರವಾಸಿಗರಿದ್ದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸಿಗಂಧೂರು ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟವೊಂದಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದ್ದು, ಬಸ್’ನಲ್ಲಿದ್ದ 25ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಆಗಮಿಸಿದ್ದ ಈ ಮಿನಿ ಬಸ್’ನಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಇದ್ದರು ಎನ್ನಲಾಗಿದೆ. ಕೊಲ್ಲೂರಿನಿಂದ ಸಿಗಂಧೂರಿಗೆ ತೆರಳುತ್ತಿದ್ದ ವೇಳೆ, ಹೊಸಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.
(ಮಾಹಿತಿ: ಓಂಕಾರ್ ತಾಳಗುಪ್ಪ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post