ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ರವರು BKSangameshwar ತಮ್ಮ ಅವಧಿಯಲ್ಲಿ ಕೋಟ್ಯಾಂತರ ರು. ವೆಚ್ಚದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು ಅವರ ಗೆಲುವಿಗೆ ಸಹಕಾರಿಯಾಗಿವೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಮುಖಂಡರು ಹೇಳಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಎಲ್ಲಾ ಭಾಗಗಳಲ್ಲೂ ಶಾಸಕರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಸುಮಾರು 40 ಪುಟಗಳ ‘ಭದ್ರಾವತಿ ಕ್ಷೇತ್ರದಲ್ಲಿ ಶಾಸಕರ ಅಭಿವೃದ್ಧಿ ಕೆಲಸಗಳು’ ಪ್ರಗತಿಯತ್ತ ಭದ್ರಾವತಿ ಚುನಾವಣಾ ಆಯೋಗದ ಅನುಮತಿ ಪಡೆದು ಮುದ್ರಣಗೊಳಿಸಲಾಗಿದ್ದು, ಇದನ್ನು ಇದೀಗ ಬಿಡುಗಡೆಗೊಳಿಸಲಾಗುತ್ತಿದೆ ಎಂದರು.

ಕ್ಷೇತ್ರದ ಮತದಾರರು ಶಾಸಕರ ಪರವಾಗಿದ್ದು, ಈ ಬಾರಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಅವರ ಗೆಲುವಿಗಾಗಿ ಒಗ್ಗಟ್ಟಿನಿಂದಾಗಿ ಶ್ರಮಿಸುತ್ತಿದ್ದಾರೆ ಎಂದರು.












Discussion about this post