ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ #NarendraModi ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ #YogiAdityanath ಭೇಟಿ ನೀಡಲಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ #BJP ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕಾಗಿ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮುಲ್ಕಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಇದಲ್ಲದೇ ಮೇ 6ರಂದು ಜಿಲ್ಲೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದ್ದು, ಸ್ಥಳ ಇನ್ನೂ ನಿಗದಿಯಾಗಿಲ್ಲ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















