ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾನು ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿದ್ದು, ಮಾಧ್ಯಮ ಸಹೋದರ-ಸಹೋದರಿಯರಿಗೆ ನೋವುಂಟಾಗಿರುವುದಕ್ಕೆ ವಿಷಾದಿಸುತ್ತೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ChallengingStarDarshan ಮಾಧ್ಯಮಗಳಿಗೆ ಪತ್ರ ಬರೆದಿದ್ದಾರೆ.
ಮಾಧ್ಯಮಗಳಿಗೆ ಬಹಿರಂಗ ಪತ್ರ ತಲುಪಿಸಿರುವ ಅವರು, ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಎಲ್ಲರೂ ನಗು ನಗುತಾ ಬಾಳೋಣ ಎಂದಿದ್ದಾರೆ.
ಈ ಕುರಿತು ಸುದೀರ್ಘವಾದ ಬರಹದೊಂದಿಗೆ ಪತ್ರವನ್ನು ಬರೆದಿರುವ ದಾಸ, 75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್, ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನತೆ ಮೆಚ್ಚಿಕೊಂಡು ಮೆರೆಸಿದರು. ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ ಎಂದಿದ್ದಾರೆ.
Also read: ಭದ್ರಾವತಿ | ಈಜಲು ತೆರಳಿದ್ದ ತುಮಕೂರಿನ ಯುವಕ ಭದ್ರಾ ನದಿ ಪಾಲು
ಈ ಸಾಲಿನಲ್ಲಿ ಇದ್ದತಂಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ ಅವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ನಾನು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆರ್ಶೀವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ. ನಾನು ಸಹ ಮುಂದಿನ ದಿನಗಳಲ್ಲಿ ಮಾಡಿದಂತಹ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವೆನು ಎಂದಿದ್ದಾರೆ.
ಅದೇ ರೀತಿಯಲ್ಲಿ ನಿಜ ಜೀವನದಲ್ಲಿ ಸಹ ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬಾ ಚಿಕ್ಕದ್ದು. ಈ ಚಿಕ್ಕ ಸಮಯದಲ್ಲಿ ನಗುನಗುತಾ ಬಾಳೋಣ. ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕು ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















