ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೋದರ ಮಾವ ನಿಧನರಾದ ಹಿನ್ನೆಲೆಯಲ್ಲಿ ತುಮಕೂರಿನಿಂದ ಭದ್ರಾವತಿಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಸಮೀರ್ (20) ಮೃತ ಯುವಕ ಈತ ಕಳೆದ 15 ದಿನಗಳ ಹಿಂದೆ ಸೋದರ ಮಾವ ನಿಧನರಾದ ಕಾರಣ ನಗರದ ಖಾಜೀ ಮೊಹಲ್ಲಾದಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ರಂಜಾನ್ ಹಬ್ಬ ಮುಗಿಸಿಕೊಂಡು ಊರಿಗೆ ಹೋಗುವಂತೆ ಮನೆಯವರೆಲ್ಲ ಹೇಳಿದ್ದರಿಂದ ಇಲ್ಲಿಯೇ ಉಳಿದಿದ್ದ. ನಿನ್ನೆ ಮದ್ಯಾಹ್ನ 3:40ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ರೈಲಿನಲ್ಲಿ ತುಮಕೂರಿಗೆ ಪ್ರಯಾಣಿಸಬೇಕಿತ್ತು. ನಿನ್ನೆ ಬೆಳಗ್ಗೆ ಸ್ನೇಹಿತರೊಂದಿಗೆ ಮನೆಯ ಹತ್ತಿರವಿದ್ದ ಭದ್ರಾ ನದಿಗೆ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
Also read: ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ: ಆಂಧ್ರ ಸಿಎಂ ಸಹೋದರಿ ಬಂಧನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















