ಶಿವಮೊಗ್ಗದ ಹೊನ್ನಳ್ಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಹಳ್ಳಿಯ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆನ್ಲೈನ್ ಮೂಲಕ ಆಯೋಜಿಸಿದ್ದ ಕಾರ್ಯಕ್ರಮವನ್ನು ಗ್ರಾಮದ ಹಲವರು ವೀಕ್ಷಿಸಿದರು.
ಸರ್ಕಾರದ ಸಾಧನೆಗಳನ್ನು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಬೇಕಿದೆ. ಕೇವಲ ಮನೆ ಹೊರಗೆ ನಿಂತು ಪಾಂಪ್ಲೆಟ್ ಕೊಟ್ಟು ಬರಬೇಡಿ. ನೀವು ಏನು ಹೇಳಲು ಹೊರಟ್ಟಿದ್ದೀರಾ ಅದು ನಿಮ್ಮ ಮೊಬೈಲ್, ಡೈರಿಯಲ್ಲಿ ಬರೆದಿಟ್ಟುಕೊಂಡಿರಬೇಕು. ನಿಮ್ಮ ತಲೆಯಲ್ಲಿ, ಹೃದಯದಲ್ಲಿ ಇರಬೇಕು. ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯವರೊಂದಿಗೆ ವಿನಯವಾಗಿ ನಡೆದುಕೊಳ್ಳಬೇಕು. ಮನೆಯ ಹಿರಿಯ ಸದಸ್ಯರಿಗೆ ನಮಸ್ಕಾರ ಮಾಡಬೇಕು. ಸಣ್ಣ ಸಣ್ಣ ಮಕ್ಕಳಿಗೆ ಪ್ರೀತಿ ತೋರಿಸಬೇಕು. ಆ ನಂತರ ಬಿಜೆಪಿ ಸರ್ಕಾರದ ಯೋಜನೆಯನ್ನು, ಸಾಧನೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಬಿಜೆಪಿ ಸರ್ಕಾರದ ಸಾಧನೆ, ಯೋಜನೆಯನ್ನು ಮತದಾರರಿಗೆ ತಿಳಿಸಿ ಹೇಳಬೇಕು ಎಂದರು.
ಡಬ್ಬಲ್ ಇಂಜಿನ್ ಸರ್ಕಾರ ಏನು ಮಾಡುತ್ತಿದೆ ಎಂಬುದು ತಿಳಿಸುವ ಅಗತ್ಯವಿದೆ. ಕೇವಲ ರಾಜಕೀಯ ಮಾಡದೇ, ಅಭಿವೃದ್ಧಿ ನಮ್ಮ ಪಣವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆ ಮಾಡಲಾಗಿದೆ. ಭ್ರಷ್ಟಾಚಾರದ ಬಗ್ಗೆ ಡಬ್ಬಲ್ ಇಂಜಿನ್ ಸರ್ಕಾರ ಪ್ರಹಾರ ಮಾಡಿದೆ. ಕಪ್ಪುಹಣ ವರ್ಗಾವಣೆ ಬಗ್ಗೆ ನಿಗಾ ಇಟ್ಟಿದೆ. ಕೆಲವರ ಜೇಬು ಸೇರುತ್ತಿದ್ದ ಹಣ ಈಗ ಸರ್ಕಾರದ ಖಜಾನೆ ಸೇರುತ್ತಿದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಡಬ್ಬಲ್ ಇಂಜಿನ್ ಸರ್ಕಾರ ಸಮರ ಸಾರಿದೆ. ರಾಜ್ಯವನ್ನು ಭ್ರಷ್ಟಮುಕ್ತವಾಗಿಸಲು ನಮ್ಮ ಸರ್ಕಾರ ಮುಂದಾಗಿದೆ. ಸಾಮಾಜಿಕವಾಗಿ ಜಾಗೃತಗೊಳಿಸಲಾಗುತ್ತಿದೆ ಎಂದು ಹೇಳಿದರು.
ಕರ್ನಾಟಕದ ಜೊತೆಗೆ ನನ್ನ ಅವಿನಾಭಾವ ಸಂಬಂಧವಿದೆ.ಕರ್ನಾಟಕದ ವಿಕಾಸಕ್ಕಾಗಿ ಹಲವಾರು ಜನರು ದುಡಿಯುತ್ತಿದ್ದಾರೆ. ಇವೆಲ್ಲವನ್ನೂ ನಾನು ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದೇನೆ. ಕೆಲವೇ ದಿನಗಳಲ್ಲಿ ಮನ್ ಕಿ ಬಾತ್ ನೂರು ಕಾರ್ಯಕ್ರಮವಾಗಿಸುವ ಕಾರ್ಯಕ್ರಮವಾಗಲಿದೆ. ಇವೆಲ್ಲವೂ ನಿಮ್ಮಿಂದ ಸಾಧ್ಯವಾಗಿದೆ ಎಂದರು.
ಗ್ರಾಮಸ್ಥರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ 50 ಲಕ್ಷ ಕಾರ್ಯಕರ್ತರೊಂದಿಗೆ ಏಕಕಾಲದಲ್ಲಿ ನಡೆದ ಸಂವಾದವು ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸ ಹೆಚ್ಚಿಸಿದೆ. ಕಾರ್ಯಕರ್ತರ ಪಾಲಿಗೆ ಪ್ರೇರಣಾಶಕ್ತಿಯಾಗಿರುವ ಪ್ರಧಾನಿಗಳು ನಮ್ಮ ಡಬಲ್ ಇಂಜಿನ್ ಸರ್ಕಾರದ ಐತಿಹಾಸಿಕ ನಿರ್ಣಯಗಳು, ಜನಪರ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ವಿರೋಧಿ ರಾಜಕಾರಣವನ್ನು ಜನರ ಮುಂದಿಟ್ಟು ಪಕ್ಷದ ಪರ ಮತ ಯಾಚಿಸುವಂತೆ ಅತ್ಯಮೂಲ್ಯವಾದ ಸಲಹೆ ನೀಡಿದ್ದಾರೆ ಎಂದರು.
Discussion about this post