ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆದರಿಕೆ ಹಾಗೂ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಹಾಗೂ ವಿ. ಸೋಮಣ್ಣ V Somanna ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.
ಈ ಕುರಿತಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಡಿ.ಕೆ. ಶಿವಕುಮಾರ್ DKShivakumar ದೂರು ನೀಡಿದ್ದಾರೆ.

ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಬೆದರಿಕೆ, ಆಮಿಷವೊಡ್ಡಿರುವ ವಿಚಾರ ಹಾಗೂ ಚುನಾವಣೆ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.
Also read: ಚುನಾವಣೆ ಹಿನ್ನೆಲೆಯಲ್ಲಿ ಬರೋಬ್ಬರಿ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ
ಈ ವೇಳೆ ಮಾತನಾಡಿರುವ ಸುರ್ಜೆವಾಲಾ, Surjevala ನಾವು ಗಂಭೀರ ವಿಚಾರವಾಗಿ ಕಾಂಗ್ರೆಸ್ ನಿಯೋಗದೊಂದಿಗೆ ಠಾಣೆಗೆ ಬಂದಿದ್ದೇವೆ. ಅಮಿತ್ ಶಾ ವಿರುದ್ಧ ದೂರು ನೀಡಿದ್ದೇವೆ. ಬಿಜೆಪಿ ನಾಯಕರು ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಪ್ರಚಾರದ ವೇಳೆ ಸುಳ್ಳು ಹೇಳಿಕೆಗಳನ್ನ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆಗಳು ಆಗುತ್ತವೆ ಎಂದರೆ ಪ್ರಚಾರದ ವೇಳೆ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಇವರ ವಿರುದ್ಧ ನಾವು ದೂರು ನೀಡಿದ್ದೇವೆ ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















