ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಮೇ ಡೇ ಕಾರ್ಮಿಕ ದಿನಾಚರಣೆ ಅಂಗವಾಗಿ ಇಂದು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferus Industries Ltd ಕಾರ್ಖಾನೆಯ ಉದ್ಯೋಗಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ಕಾರ್ಖಾನೆಯನ್ನು ಸಂದರ್ಶಿಸಲು ಇಂದು ಆಡಳಿತ ಮಂಡಳಿ ಅನುವು ಮಾಡಿಕೊಟ್ಟಿದ್ದು, ಇಂದು ಬೆಳಿಗ್ಗೆ 7:30ರಿಂದ ಮಧ್ಯಾಹ್ನ 1:30ರ ತನಕ ಕಾರ್ಖಾನೆಯ ವಿವಿಧ ವಿಭಾಗಗಳನ್ನು ಸಂದರ್ಶಿಸಲು ಅವಕಾಶ ನೀಡಲಾಗಿತ್ತು.
ಕೊಪ್ಪಳ ಹೊಸಪೇಟೆ ಹಾಗೂ ಇನ್ನಿತರ ಭಾಗಗಳಿಂದ ಕಾರ್ಖಾನೆಯ ಉದ್ಯೋಗಿಗಳು ತಮ್ಮ ಕುಟುಂಬದ ಸದಸ್ಯರುಗಳನ್ನು ಕರೆದುಕೊಂಡು ಬಂದು, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯನ್ನು ವೀಕ್ಷಣೆ ಮಾಡಿ ಸಂತಸ ವ್ಯಕ್ತಪಡಿಸಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಪಿ. ನಾರಾಯಣ್ ಹಾಗೂ ಕಾರ್ಖಾನೆಯ ಪ್ರೆಸಿಡೆಂಟ್ ಸಿ. ರಮೇಶ ಅವರು ಈ ಸಂದರ್ಭದಲ್ಲಿ ಹಾಜರಿದ್ದು ಎಲ್ಲಾ ಉದ್ಯೋಗಿಗಳಿಗೆ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಕೋರಿದರು.

ಇಂದಿನ ಈ ಕಾರ್ಖಾನೆ ವೀಕ್ಷಣೆಗಾಗಿ ಸುಮಾರು 1000ಕ್ಕೂ ಹೆಚ್ಚು ಉದ್ಯೋಗಿ ಸದಸ್ಯರು ಭಾಗವಹಿಸಿ ಸಂತಸವನ್ನು ಹಂಚಿಕೊಂಡರು.
ವರದಿ: ಮುರುಳಿಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post