ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಸಕ್ತ ಸಾಲಿನ ಎಸ್’ಎಸ್’ಎಲ್’ಸಿ ವಾರ್ಷಿಕ ಪರೀಕ್ಷಾ ಫಲಿತಾಂಶ ಮೇ 8ರ ನಾಳೆ ಪ್ರಕಟಗೊಳ್ಳಲಿದೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ನಾಳೆ ಮುಂಜಾನೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ಮೇ 8ರ ನಾಳೆ ಬೆಳಗ್ಗೆ 11 ಗಂಟೆಯ ನಂತರ karresults.nic.in / kseab.karnataka.gov.in ಜಾಲತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
Discussion about this post