ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಇಲ್ಲಿನ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಬಿ.ಎಸ್. ವಿಧಾತ್ರಿ ಮತ್ತು ವರ್ಶಿಣಿ ಡಿ. ಗೌಡ 600ಕ್ಕೂ ಹೆಚ್ಚು ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವರ್ಶಿಣಿ ಡಿ. ಗೌಡ ಕನ್ನಡದಲ್ಲಿ 125, ಇಂಗ್ಲಿಷ್, ಹಿಂದಿ, ವಿಜ್ಞಾನ ಮತ್ತು ಸಮಾಜದಲ್ಲಿ 100ಕ್ಕೆ 99 ಅಂಕ ಗಳಿಸಿ 625ಕ್ಕೆ 619 ಅಂಕ ತಮ್ಮದಾಗಿಸಿಕೊಂಡಿದ್ದಾರೆ. ಈಕೆ ಶ್ಯಾಮಲಾ ಮತ್ತು ದಿವಾಕರ್ ಅವರ ಪುತ್ರಿ.
ಬಿ.ಎಸ್. ವಿಧಾತ್ರಿ ಕನ್ನಡದಲ್ಲಿ 125ಕ್ಕೆ 125 ಅಂಕ ಗಳಿಸಿದ್ದು, 625ಕ್ಕೆ 609 ಅಂಕ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ. ಬಿ.ಎಮ್. ಸುಬ್ರಹ್ಮಣ್ಯ ಮತ್ತು ಉಷಾ ಅವರ ಪುತ್ರಿ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post