ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ 140 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬಿಜೆಪಿ ಬರುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ KSEshwarappa ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಅತಂತ್ರ ಸರ್ಕಾರ ಬರುತ್ತದೆ ಅಂತ ಅವರೇ ಹೇಳಿದ್ದಾರೆ. ಬಹುಮತ ಬರುವುದಿಲ್ಲ ಅಂತ ಅವರಿಗೆ ಗೊತ್ತಾಗಿದೆ ಎಂದರು.

ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ನನ್ನ ಚುನಾವಣೆಗೆ ಕೆಲಸ ಮಾಡಿದ ಕಾರ್ಯಕರ್ತ ಅಭ್ಯರ್ಥಿ ಆಗಿರುವುದು ಸಂತೋಷ ತಂದಿದೆ. ಶಿವಮೊಗ್ಗದಲ್ಲಿ ನಾನು ಮತದಾನ ಮಾಡಿದ್ದೇನೆ. ಅತಿ ಹೆಚ್ಚು ಮತದಾನ ಆಗುವ ನಿರೀಕ್ಷೆಯಿದೆ. ಶಿವಮೊಗ್ಗ ನಗರದಲ್ಲಿ ನಾವು ಗೆಲುವು ಸಾಧಿಸಿತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಹಿಂದುತ್ವದ ರಾಜಧಾನಿ. ಅಭಿವೃದ್ಧಿ ಕೆಲಸ ಮಾಡಿಕೊಟ್ಟಿದ್ದೇವೆ. ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ನಿಶ್ಚಿತ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post