ಕಲ್ಪ ಮೀಡಿಯ ಹೌಸ್ | ಶಿವಮೊಗ್ಗ |
ಇಲ್ಲಿನ ಚೋರಡಿ ಸಮೀಪ ಇಂದು ಸಂಜೆ ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತಂತೆ ಅಧಿಕೃತ ಮೂಲಗಳ ಮಾಹಿತಿಯಂತೆ ಅಪಘಾತದಲ್ಲಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಇನ್ನೂ ಘಟನೆಯಲ್ಲಿ ಆರು ಮಂದಿದೆ ತೀವ್ರತರವಾದ ಗಾಯಗಳಾಗಿದ್ದು, ಎಲ್ಲರನ್ನು ಮೆಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಎರಡೂ ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಬಸ್ಸುಗಳು ಒಂದರೊಳಗೆ ಒಂದು ನುಗ್ಗಿವೆ. ಜೆಸಿಬಿ ಬಳಸಿ ಬಸ್ಸುಗಳನ್ನು ಬೇರ್ಪಡಿಸಲಾಗಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಅಪಘಾತದಿಂದಾಗಿ ಶಿವಮೊಗ್ಗ ಸಾಗರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಎರಡು ಬದಿಯಲ್ಲಿ ಸುಮಾರು ಎರಡು ಕಿಮೀನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post