ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಜಯ ದಾಖಲಿಸಿದ್ದಾರೆ.
ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದು ಜಯಭೇರಿ ಬಾರಿಸಿದ್ದಾರೆ.ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ.
ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೇ ಶಕ್ತರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post