ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ಉಜಿರೆ ಟೆಲಿಪೋನ್ ಎಕ್ಸ್ ಚೇಂಜ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ತಂಡ ತಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಡಿಕೇರಿಯ ಕುಶಾಲನಗರ ಮೂಲದ ತಮ್ಮಯ್ಯ (55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಇವರು ಹಲವು ವರ್ಷಗಳಿಂದ ಉಜಿರೆಯಲ್ಲಿ ವಾಸಿಸುತ್ತಿದ್ದರು. ಅವರು ಬಸ್ ನಿಲ್ಡಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಎನ್ಎಲ್ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.
ತಮ್ಮಯ್ಯ (55) ಮಡಿಕೇರಿಯ ಕುಶಾಲನಗರ ಮೂಲದ ವ್ಯಕ್ತಿಯಾಗಿದ್ದು, ಇವರು ಹಲವು ವರ್ಷಗಳಿಂದ ಉಜಿರೆಯಲ್ಲಿ ವಾಸಿಸುತ್ತಿದ್ದರು. ಅವರು ಬಸ್ ನಿಲ್ಡಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಎನ್ಎಲ್ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.
Also read: ಸೋತಿದ್ದೇನೆ ಎಂದು ಸುಮ್ಮನೆ ಕೂರಲ್ಲ, ಜನ ಸೇವೆಗೆ ಸದಾ ಸಿದ್ಧ: ಪರಶುರಾಮ್ ಭರವಸೆ
ಪೊಲೀಸರು ಕುಟುಂಬದವರ ಪತ್ತೆಗಾಗಿ ಹುಡುಕಾಡುತ್ತಿದ್ದಾರೆ. ಅಲ್ಲದೇ ವ್ಯಕ್ತಿಯ ಮೃತದೇಹದ ಬಳಿ ಇದ್ದ ಚೀಲವನ್ನು ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಕಂಡುಬಂದಿದ್ದು, ಹಣವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಈ ಘಟನೆ ಬಗ್ಗೆ ಕುಟುಂಬದಲ್ಲಿ ಯಾರಿಗೂ ತಿಳಿದಿಲ್ಲ. ಇವರ ಮೃತದೇಹ ಟೆಲಿಪೋನ್ ಎಕ್ಸ್ ಚೇಂಜ್ ಟರ್ ಬಳಿ ಪತ್ತೆಯಾಗಿದ್ದು, ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ತಂಡ ತಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post