ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಈ ಬಾರಿ ಚುನಾವಣೆಯಲ್ಲಿ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸಿದ್ದೇವೆ. ಕ್ಷೇತ್ರದ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿ 20 ಸಾವಿರಕ್ಕೂ ಹೆಚ್ಚಿನ ಮತಗಳನ್ನು ಪಡೆದುಕೊಂಡಿದ್ದು, ಇದರಿಂದಾಗಿ ಭವಿಷ್ಯದಲ್ಲಿ ನೆಲೆ ಇದೆ ಎಂಬುದನ್ನು ತೋರಿಸಿ ಕೊಡಲಾಗಿದೆ. ಇದು ನನಗೆ ತೃಪ್ತಿ ತಂದಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ಹೇಳಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಭವಿಷ್ಯದಲ್ಲಿ ನೆಲೆ ಇದೆ ಎಂಬುದನ್ನು ಈ ಚುನಾವಣೆ ಮೂಲಕ ತೋರಿಸಿಕೊಡಲಾಗಿದೆ. ಅತಿ ಹೆಚ್ಚು ಮತಗಳನ್ನು ನೀಡಿರುವ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಎಲ್ಲಾ ಧರ್ಮ, ಜಾತಿ, ಜನಾಂಗದವರು ನನಗೆ ಮತ ನೀಡಿದ್ದು, ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಕ್ಷೇತ್ರದ ಎಲ್ಲಾ ಬೂತ್‌ಗಳಲ್ಲೂ ನನಗೆ ಮತ ಚಲಾವಣೆಯಾಗಿದ್ದು, ಇದರಿಂದಾಗಿ ಕ್ಷೇತ್ರದಲ್ಲೆಡೆ ಪಕ್ಷ ಸಂಘಟನೆಗೆ ಮತ್ತಷ್ಟು ಸ್ಪೂರ್ತಿ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಮುಖರಾದ ಕೂಡ್ಲಿಗೆರೆ ಹಾಲೇಶ್, ತೀರ್ಥಯ್ಯ, ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ವಿ. ಕದಿರೇಶ್, ಜಿ. ಆನಂದಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post