ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿದ್ಯಾರ್ಥಿನಿಯರಿಗೆ ಕೇರಳ ಸ್ಟೋರಿ ಚಲನಚಿತ್ರ ಮೂಲಕ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಬಜರಂಗದಳ ತೊಡಗಿಸಿಕೊಂಡಿದ್ದು, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
ನಗರದ ಸಿ.ಎನ್ ರಸ್ತೆಯಲ್ಲಿರುವ ನೇತ್ರಾವತಿ ಚಿತ್ರಮಂದಿರದಲ್ಲಿ ಮೇ.12ರಿಂದ ಪ್ರತಿದಿನ ಚಲನಚಿತ್ರ 4 ಪ್ರದರ್ಶನಗೊಳ್ಳುತ್ತಿದ್ದು, ಕೇರಳ ಸ್ಟೋರಿ ಚಲನಚಿತ್ರ ವೀಕ್ಷಣೆಗೆ ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. ಬಜರಂಗದಳ ವತಿಯಿಂದ ಗುರುವಾರ ಮೊದಲ ಪ್ರದರ್ಶನದಲ್ಲಿ ವಿವಿಧ ಕಾಲೇಜುಗಳ ಸುಮಾರು 150 ವಿದ್ಯಾರ್ಥಿನಿಯರಿಗೆ ಉಚಿತ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post