ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DKShivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕನಕನಗಿರಿ ಕ್ಷೇತ್ರದ ಶಾಸಕ ಹಾಗೂ ಭೋವಿ ಸಮಾಜದ ನಾಯಕ ಶಿವರಾಜ್ ತಂಗಡಗಿ ಅವರಿಗೆ ಉನ್ನತ ಸಚಿವ ಸ್ಥಾನ ನೀಡುವಂತೆ
ಶಿವಮೊಗ್ಗ ತಾಲೂಕು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಭೋವಿ ಸಮಾಜದ ಮುಖಂಡ ಹರ್ಷ ಭೋವಿ ಒತ್ತಾಯಿಸಿದ್ದಾರೆ.
ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕನಗಿರಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವರಾಜ್ ತಂಗಡಗಿ ಅವರು ಅತ್ಯಧಿಕ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಸಂಘಟನೆಯ ಜತೆಗೆ ರಾಜ್ಯದಲ್ಲಿ ಭೋವಿ ಸಮಾಜದ ಸಂಘಟನೆ ಮತ್ತು ಅಭಿವೃದ್ದಿಗೆ ತಮ್ಮದೇ ಸೇವೆ ಸಲ್ಲಿಸಿದ್ದಾರೆ .ಕಾಂಗ್ರೆಸ್ ಪಕ್ಷದ ಮುಖಂಡರು ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಹರ್ಷ ಭೋವಿ ಮನವಿ ಮಾಡಿದ್ದಾರೆ.

Also read: ಸಕಲೇಶಪುರ | ಪಡಿತರ ಅಂಗಡಿ ಮೇಲೆ ಕಾಡಾನೆ ದಾಳಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post