ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯ ಬಿಜೆಪಿ ಅಭಿನಂದನೆ ತಿಳಿಸಿದೆ.
ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಲಿರುವ ಶ್ರೀ @siddaramaiah ಮತ್ತು ಶ್ರೀ @DKShivakumar ಅವರಿಗೆ ಅಭಿನಂದನೆಗಳು.
ತಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಲಿದೆ ಹಾಗೂ ಕನ್ನಡಿಗರು ಸುರಕ್ಷಿತರಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ.
ಅದೇ ರೀತಿ, ಚುನಾವಣಾ ಪೂರ್ವದಲ್ಲಿ…
— BJP Karnataka (@BJP4Karnataka) May 20, 2023
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ ಮತ್ತು ಕನ್ನಡಿಗರಿಗೆ ಸುರಕ್ಷತೆಯನ್ನು ಒದಗಿಸುತ್ತೀರ ಎಂದು ನಾವು ಭಾವಿಸುತ್ತೇವೆ ಎಂದು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿದೆ.
ಹಿಮಾಚಲ ಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ನೀಡಿರುವ ನಿಮ್ಮ ಸುಳ್ಳುಗಳಂತೆ ಆಗದೆ, ಮುಂದಿನ ದಿನಗಳಲ್ಲಿ ನೀವು ಭರವಸೆ ನೀಡಿದ ಐದು ‘ಖಾತರಿ’ಗಳನ್ನು ಬೇಷರತ್ತಾಗಿ ಜಾರಿಗೊಳಿಸುತ್ತೀರಿ ಎಂದು ನಾವು ನಂಬುತ್ತೇವೆ ಎಂದು ಟೀಕಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post