ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೇ 22ರ ಸೋಮವಾರದಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಸಲಾಗುತ್ತದೆ ಎಂದು ನೂತನ ಸಿಎಂ ಸಿದ್ದರಾಮಯ್ಯ CM Siddaramaih ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮೂರು ದಿನಗಳ ಕಾಲ ಅಧಿವೇಶನ ನಡೆಸಲು ಅನುಮತಿಗೆ ರಾಜ್ಯಪಾಲರನ್ನು ಕೋರಿದ್ದೇವೆ ಎಂದರು.
ಹಿರಿಯ ನಾಯಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಲು ನಿರ್ಧರಿಸಿದ್ದು, ಈ ಕುರಿತಂತೆ ಅವರೊಂದಿಗೆ ಮಾತನಾಡಲಾಗುತ್ತಿದೆ. ಶೀಘ್ರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ನೂತನವಾಗಿ ಆಯ್ಕೆಯಾದ ಸದಸ್ಯರುಗಳು ಪ್ರಮಾಣ ವಚನ ಪಡೆಯಬೇಕಿದೆ. ಮುಂದಿನ ವಾರ ನಡೆಯಲಿರುವ ಅಧಿವೇಶನದಲ್ಲಿ ಇದು ನಡೆಯಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















