ಕಲ್ಪ ಮೀಡಿಯಾ ಹೌಸ್ | ಬೀದರ್/ಬೆಂಗಳೂರು |
ತಮ್ಮ ಮೇಲೆ ನಂಬಿಕೆಯಿಟ್ಟು ಚುನಾವಣೆಯಲ್ಲಿ ಮತನೀಡಿ ಗೆಲ್ಲಿಸಿರುವ ಜನರ ಹಿತಕಾಯುವ ಜೊತೆಯಲ್ಲಿ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಬೀದರ್ ದಕ್ಷಿಣ #BidarSouth ನೂತನ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ #DrShailendraBeldale ಹೇಳಿದ್ದಾರೆ.
16ನೆಯ ವಿಧಾನಸಭೆಯ ಮೊದಲ ಅಧಿವೇಶನದ ಪ್ರಥಮ ದಿನವಾದ ಇಂದು ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು, ಕಲಾಪದ ನಂತರ ಮಾತನಾಡಿದರು.
ಮೊದಲ ಬಾರಿಗೆ ವಿಧಾನಸಭೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದ ಬೀದರ್ ದಕ್ಷಿಣ ಕ್ಷೇತ್ರದ ಮತದಾರರಿಗೆ, ಪಕ್ಷದ ಮುಖಂಡರಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ದುಡಿದು ಕ್ಷೇತ್ರ ಅಭಿವೃದ್ಧಿ ಪಡಿಸುವೆ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿ ಬೀದರ್ ದಕ್ಷಿಣ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಧಾನಸಭೆಗೆ ಪ್ರವೇಶಿಸುವ ಮುನ್ನ ದ್ವಾರಕ್ಕೆ ನಮಸ್ಕರಿಸಿ ವಿಧಾಸಭೆಯಲ್ಲಿ ಭಾಗವಹಿಸಿದ್ದರು.
ಬಳಿಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ಮೊದಲ ಬಾರಿ ದೇವರ ಹೆಸರಲ್ಲಿ, ಮನೆ ದೇವರು ಕೇತಕಿ ಸಂಗಮೇಶ್ವರ್, ತಂದೆ ತಾಯಿ, ಕ್ಷೇತ್ರದ ಮತದಾರರ ಹೆಸರಿನಲ್ಲಿ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಪ್ರಮಾಣ ವಚನ ಸ್ವೀಕರಿಸಿದರು.
Discussion about this post