No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಒತ್ತಾಯ

ರೈಲ್ವೆ ಅಧಿಕಾರಿಗಳೊಂದಿಗೆ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ

kalpa News by kalpa News
May 23, 2023
in ಶಿವಮೊಗ್ಗ
0
ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಲು ಸಂಸದ ರಾಘವೇಂದ್ರ ಒತ್ತಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾಪ್ರಬಂಧಕರಾದ ಸಂಜೀವ್ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ. ರಾಘವೇಂದ್ರ MP Raghavendra ಅವರು ಮೇ 22ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ರೈಲ್ವೆ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ಕ್ರಮ ಕೈಗೊಳ್ಳಲು ಮಾನ್ಯ ಸಂಸದರು ರೈಲ್ವೆ ಇಲಾಖೆಯನ್ನು #IndianRailway  ಒತ್ತಾಯಿಸುತ್ತಲೇ ಇದ್ದರ ಫಲವಾಗಿ ಕೇಂದ್ರ ಸರ್ಕಾರವು 2023-24ರ ಬಜೆಟ್ ನಲ್ಲಿ ಘೋಷಿಸಿದ ‘ಅಮೃತ್ ಭಾರತ್ #AmrutBharat ಯೋಜನೆಯಡಿ, ರೂ. 22.5 ಕೋಟಿಗಳ ವೆಚ್ಚದಲ್ಲಿ ತಾಳಗುಪ್ಪ ರೈಲ್ವೆ ನಿಲ್ದಾಣವನ್ನು ರೂ. 19.28 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ #Shivamogga ನಗರದ ರೈಲ್ವೆ ನಿಲ್ದಾಣವನ್ನು ಮತ್ತು ರೂ. 21.10 ಕೋಟಿಗಳ ವೆಚ್ಚದಲ್ಲಿ ಸಾಗರ ರೈಲ್ವೆ ನಿಲ್ದಾಣವನ್ನು ಹಾಗೂ ರೂ. 33.00 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ ಗೂಡ್ಸ್ ಯಾರ್ಡನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕೇಂದ್ರ ರೈಲ್ವೆ ಇಲಾಖೆಯು ಅನುದಾನ ಒದಗಿಸಿದೆ.
ಪ್ರಯಾಣಿಕ ಸ್ನೇಹಿ ಸವಲತ್ತುಗಳಾದ ಗ್ರಾನೇಟ್ ನೆಲಹಾಸಿನ ಪ್ಲಾಟ್ ಫಾರಂ, ಡಿಜಿಟಲ್ ಸಿಗ್ನಲ್ಸ್, ಪ್ಲಾಟ್ ಫಾರಂ ಶೆಲ್ಪರ್, ಪಾರ್ಕಿಂಗ್ ಜಾಗದಲ್ಲಿ ಶೆಡ್ ನಿರ್ಮಾಣ, ಕಾಂಪೌಂಡ್ ವಾಲ್ ನಿರ್ಮಾಣ, ಸರ್ಕುಲೇಟಿಂಗ್ ಏರಿಯಾ ಅಭಿವೃದ್ಧಿ, ಸ್ಪೇಷನ್ ನಿಲ್ದಾಣದ ಸೌಂದರೀಕರಣ, ನಿಲ್ದಾಣದ ಮುಂಭಾಗದ ಉದ್ಯಾನವನ, ಫೂಟ್ ಓವರ್ ಬ್ರಿಡ್, ಆಧುನಿಕ ಶೌಚಾಲಯಗಳು, ಉತ್ತಮ ಗುಣಮಟ್ಟದ ವಿದ್ಯುತ್ ಬೆಳಕಿನ ವ್ಯವಸ್ಥೆ, ಸಿಸಿ ಟಿವಿ ರೈಲ್ವೆ ಉದ್ಘೋಷಣಾ ವ್ಯವಸ್ಥೆ ಇಂತಹ ಹಲವಾರು ಸವಲತ್ತುಗಳನ್ನು ಒದಗಿಸುವ ಯೋಜನೆಯು ಮಂಜೂರಾತಿಗೊಂಡಿದೆ. ಹಾಗೆಯೇ ಶಿವಮೊಗ್ಗ ಗೂಡ್ಸ್ ಯಾರ್ಡನಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ, ಪಡಿತರ ಧಾನ್ಯ, ಸಿಮೆಂಟ್, ಕಬ್ಬಿಣ ಮತ್ತಿತರ ಅಗತ್ಯ ವಸ್ತುಗಳನ್ನು ಶೀಘ್ರವಾಗಿ ಲಭ್ಯವಾಗುವಂತೆ ಮಾಡಲು ಕ್ರಮಕೈಗೊಳ್ಳುವುದಾಗಿ ಸಭೆಯಲ್ಲಿ ರೈಲ್ವೆ ಉನ್ನತಾಧಿಕಾರಿಗಳು ತಿಳಿಸಿರುತ್ತಾರೆ.

ಸುಮಾರು ರೂ. 100 ಕೋಟಿಗಳ ಅನುದಾನವನ್ನು ಈ ನಾಲ್ಕು ರೈಲ್ವೆ ನಿಲ್ದಾಣ/ಯಾರ್ಡ್’ಗಳ ಅಭಿವೃದ್ಧಿಗಾಗಿ ಒದಗಿಸಿರುವ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್, ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮನ್ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ವೈಯಕ್ತಿಕವಾಗಿ ಹಾಗೂ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದಗಳನ್ನು ಸಂಸದರು ಸಲ್ಲಿಸಿದ್ದಾರೆ.
2019-20ರ ಕೇಂದ್ರ ಮುಂಗಡ ಪತ್ರದಲ್ಲಿ ಮಲೆನಾಡಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಸೇತುವೆಯಾಗುವ ರೂ.1,200 ಕೋಟಿಗಳ ಅಂದಾಜು ವೆಚ್ಚದಲ್ಲಿ ಮಂಜೂರಾಗಿರುವ ಶಿವಮೊಗ್ಗ ಶಿಕಾರಿಪುರ ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗ ಯೋಜನೆಯ ಮೊದಲನೇ ಹಂತವಾದ ಶಿವಮೊಗ್ಗ-ಶಿಕಾರಿಪುರ (46 ಕಿಮೀ) ನಡುವಿನ ಕಾಮಗಾರಿಗೆ ಅಗತ್ಯವಿರುವ ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿಯನ್ನು ನಿರ್ವಹಿಸಲು ಗುತ್ತಿಗೆದಾರರನ್ನು ಸಹ ನಿಗದಿಪಡಿಸಲಾಗಿದೆ.

2023ರ ಫೆ.27 ರಂದು ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯರವರ ಅಮೃತ ಹಸ್ತದಿಂದ ಶಿಲಾನ್ಯಾಸಗೊಂಡಿರುವ ಈ ಯೋಜನೆಯ ಕಾಮಗಾರಿಯ ಪೂರ್ವಭಾವಿ ಸಿದ್ಧತೆಗಳು ಆರಂಭಗೊಂಡಿದ್ದು, ಮುಂದಿನ ವಾರದಿಂದ ಕಾಮಗಾರಿಯನ್ನು ಪ್ರಾರಂಭಿಸಿ 2025ರ ಡಿಸೆಂಬರ್ ವೇಳೆಗೆ ಶಿವಮೊಗ್ಗ-ಶಿಕಾರಿಪುರ ನಡುವಿನ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿರುತ್ತಾರೆ.ಭದ್ರಾವತಿಯ ಕಡದಕಟ್ಟೆ ಹತ್ತಿರ ರೈಲ್ವೆ ಎಲ್‍ಸಿ 33, ಶಿವಮೊಗ್ಗ ನಗರದ ಸವಳಂಗ ರಸ್ತೆಯ ಎಲ್‍ಸಿ 49 ಹಾಗೂ ಕಾಶಿಪುರ ಗೇಟ್ ಬಳಿಯ ಎಲ್‍ಸಿ 52 ರ ಬದಲಿಗೆ ನಿರ್ಮಿಸಲಾಗುತ್ತಿರುವ ROB/RUB ಗಳ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಅವಳಿ ನಗರಗಳ ವಾಹನಗಳ ದಟ್ಟಣೆಯ ಸಮಸ್ಯೆಗೆ ಈ ಯೋಜನೆಗಳನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯತೆಯನ್ನು ತಿಳಿಯಪಡಿಸಲಾಗಿ ಇವುಗಳನ್ನು ಕ್ರಮವಾಗಿ ಡಿಸೆಂಬರ್ 2023. ಅಕ್ಟೋಬರ್ 2023 ಹಾಗೂ ಜೂನ್ 2023ರ ಒಳಗೆ ಪೂರ್ಣಗೊಳಿಸುವುದಾಗಿ ಪ್ರಧಾನ ವ್ಯವಸ್ಥಾಪಕರು ತಿಳಿಸಿರುದ್ದಾರೆ.

ಶಿವಮೊಗ್ಗ ಜಿಲ್ಲೆಯ ಮೊದಲ ಕೋಚಿಂಗ್ ಡಿಪ್ಲೊಮಾ ಆದಂತಹ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಅನ್ನು 2020-21ರ ಮುಂಗಡ ಪತ್ರದಲ್ಲಿ ಸುಮಾರು 100.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಮಂಜೂರು ಮಾಡಲಾಗಿದೆ. ರಾಜ್ಯ ಸರ್ಕಾರವು ಈ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಈಗಾಗಲೇ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. 3 ಪ್ಲಾಟ್ ಫಾರಂಗಳನ್ನೊಳಗೊಂಡ ಕೋಟೆಗಂಗೂರಿನ ನೂತನ ರೈಲ್ವೆ ನಿಲ್ದಾಣ, 2 ಪಿಟ್‍ಲೈನ್, 3 ಸಿಕ್‍ಲೈನ್, 3 ಸ್ಟೇಬಲಿಂಗ್ ಲೈನ್‍ಗಳನ್ನೊಳಗೊಂಡಿದೆ. ಈ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಈಗಾಗಲೇ ಆರಂಭಗೊಂಡಿದೆ. 2024ರ ಮೇ ಅಥವಾ ಜೂನ್ ಮೊದಲು ಈ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ನೈರುತ್ಯ ರೈಲ್ವೆಯ ಸಭೆಯಲ್ಲಿ ತಿಳಿಸಿದ್ದಾರೆ.
ಸಂಸದರು ಭವಿಷ್ಯದಲ್ಲಿ ವಂದೇ ಭಾರತ್ ರೈಲುಗಾಡಿಯನ್ನು ಸಹ ಇಲ್ಲಿ ನಿರ್ವಹಣೆ ಮಾಡಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ಕೋರಿದ್ದು, ಜನರಲ್ ಮ್ಯಾನೇಜರ್ ರವರು ಈ ಬಗ್ಗೆ ಪೂರಕವಾಗಿ ಸ್ಪಂದಿಸಿ ನೂತನ ಯೋಜನಾ ವರದಿಯನ್ನು ಸಿದ್ದಪಡಿಸಿ ರೈಲ್ವೆ ಮಂಡಳಿಯಿಂದ ಮಂಜೂರಾತಿ ಪಡೆಯಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ತಾಳಗುಪ್ಪ – ತಡಸ – ಹೊನ್ನಾವರ – ಶಿರಸಿ – ಹುಬ್ಬಳ್ಳಿ ನೂತನ ರೈಲ್ವೆ ಮಾರ್ಗ ಯೋಜನೆಯ ಸರ್ವೆ ಕಾಮಗಾರಿಯು ಪೂರ್ಣಗೊಂಡಿದ್ದು, ನೈರುತ್ಯ ರೈಲ್ವೆಯು ಸರ್ವೆ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಸಂಸದರು ಈ ಯೋಜನೆ ಮಂಜೂರು ಮಾಡಲು ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್‍ರವರನ್ನು ಈಗಾಗಲೇ ಕೋರಿದ್ದು ನೈರುತ್ಯ ರೈಲ್ವೆಯಿಂದಲು ಸಹ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಯಿತು.

ಅರಸಾಳು ಮತ್ತು ಹಾರನಹಳ್ಳಿಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ಎಕ್ಸ್‍ಪ್ರೆಸ್ ರೈಲುಗಳ ನಿಲುಗಡೆಯನ್ನು ಮಾಡಲು ಸಂಸದರು ಒತ್ತಾಯಿಸಿದರು. ಈ ಕುರಿತಂತೆ ಅಗತ್ಯ ಕ್ರಮಕೈಗೊಳ್ಳುವುದಾಗಿ ನೈರುತ್ಯ ರೈಲ್ವೆಯವರು ತಿಳಿಸಿರುತ್ತಾರೆ.

https://kalpa.news/wp-content/uploads/2023/05/VID-20230516-WA0005-1.mp4

ಬೆಂಗಳೂರು ಹಾಗು ಶಿವಮೊಗ್ಗ ನಗರಗಳ ನಡುವೆ ವಂದೇ ಭಾರತ ರೈಲು ಸೇವೆಯನ್ನು ಆರಂಭಿಸಲು ಕ್ರಮಕೈಗೊಳ್ಳಬೇಕೆಂದು ಸಂಸದರು ಒತ್ತಾಯಿಸಿದರು. ಈ ಕುರಿತಂತೆ ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ – ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುತ್ತಿರುವ ರೈಲುಗಳ ವೇಳಾಪಟ್ಟಿಯಲ್ಲಿ ಕೆಲ ಸಣ್ಣ ಪುಟ್ಟ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಈ ರೈಲುಗಳ ಸೇವೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವಂತೆ ಮಾಡಲು ಸಂಸದರು ಮನವಿ ಮಾಡಿದರು. ನೈರುತ್ಯ ರೈಲ್ವೆಯು ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಸಾಧ್ಯವಿರುವಲ್ಲಿ ಶಿಫಾರಸು ಮಾಡುವಂತೆ ಸೂಕ್ತ ಬದಲಾವಣೆಗಳನ್ನು ಮಾಡುವ ನಿಟ್ಟಿನಲ್ಲಿ ರೈಲ್ವೆ ಉನ್ನತ ಅಧಿಕಾರಿಗಳು ತಿಳಿಸಿರುತ್ತಾರೆ ಎಂದು ಸಂಸದರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: B Y RaghavendraIndian RailwayKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaRailwayShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಮೊದಲ ನಾಲ್ಕು ರ್‍ಯಾಂಕ್‌ಗಳು ಮಹಿಳೆಯರ ಪಾಲು

Next Post

ಸೊರಬ: ಶ್ರೀ ಚಂದ್ರಮೌಳೇಶ್ವರ ದೇಗುಲದಲ್ಲಿ ವರುಣನ ಕೃಪೆಗಾಗಿ ಪ್ರಾರ್ಥಿಸಿ ಪರ್ಜನ್ಯ ಜಪ

kalpa News

kalpa News

Next Post
ಸೊರಬ: ಶ್ರೀ ಚಂದ್ರಮೌಳೇಶ್ವರ ದೇಗುಲದಲ್ಲಿ ವರುಣನ ಕೃಪೆಗಾಗಿ ಪ್ರಾರ್ಥಿಸಿ ಪರ್ಜನ್ಯ ಜಪ

ಸೊರಬ: ಶ್ರೀ ಚಂದ್ರಮೌಳೇಶ್ವರ ದೇಗುಲದಲ್ಲಿ ವರುಣನ ಕೃಪೆಗಾಗಿ ಪ್ರಾರ್ಥಿಸಿ ಪರ್ಜನ್ಯ ಜಪ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL