ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೆಂಗಳೂರು |
ಇಂದು ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆಯವರ ಸಮ್ಮುಖದಲ್ಲಿ ಸೊರಬ ವಿಧಾನಸಭಾ ಶಾಸಕ ಎಸ್. ಮಧು ಬಂಗಾರಪ್ಪ, Madhu Bangarappa ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯನಾಯ್ಕ್ Sharadha Pooryanaik ಪ್ರಮಾಣವಚನ ಸ್ವೀಕರಿಸಿದರು.
ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ:
ಸಂವಿಧಾನ ಮತ್ತು ದೇವರ ಹೆಸರಿನಲ್ಲಿ ವಿಧಾನಸೌಧದಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆಯವರ ಸಮ್ಮುಖದಲ್ಲಿ ಶಾಸಕರಾಗಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕರಿಸಿದರು.
ಕ್ಷೇತ್ರದ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತೇನೆ. ನುಡಿದಂತೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸವನ್ನು ಉಳಿಸಿಕೊಳ್ಳುವ ಕಾರ್ಯವನ್ನು ಮಾಡುತ್ತೇನೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದು. ಹಕ್ಕುಪತ್ರ ಸಮಸ್ಯೆ, ನೀರಾವರಿ ಸಮಸ್ಯೆಗಳಿಗೆ ಹೋರಾಡಿ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.
Also read: ನಾಡಿಗೆ ಶ್ರೀ ವ್ಯಾಸರಾಜರ ಕೊಡುಗೆ ಅಪೂರ್ವ: ಶ್ರೀ ವಿದ್ಯಾಶ್ರೀಶ ತೀರ್ಥರ ಅಭಿಮತ
ಚುನಾವಣೆಯಲ್ಲಿ ಹಗಲಿರುಳು ದುಡಿದು, ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು, ನನ್ನನ್ನು ಆಯ್ಕೆ ಮಾಡಿ ವಿಧಾನಸೌಧಕ್ಕೆ ಕಳುಹಿಸಿಕೊಟ್ಟ ಕ್ಷೇತ್ರದ ಮತದಾರರಿಗೆ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post