ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ಲುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಆಯನೂರಿನಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಸಚಿನ್ ಎಂದು ಗುರುತಿಸಲಾಗಿದ್ದು, ಈತ ಆಯನೂರಿನ ಬಾರ್‌ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಬಾರಿಗೆ ಆಯನೂರು ಪಕ್ಕದ ಗ್ರಾಮದ ಸತೀಶ್ ನಾಯ್ಕ, ಅಶೋಕ್ ನಾಯ್ಕ, ಮತ್ತು ನಿರಂಜನ ಎಂಬುವವರು ಕುಡಿಯಲು ಬಂದಿದ್ದು, ಕ್ಯಾಶಿಯರ್ ಸಚಿನ್ 11:30 ಆಗಿದೆ ಬಾಗಿಲು ಹಾಕಬೇಕು ನೀವು ಎದ್ದು ಹೋಗಿ ಎಂದಿದ್ದಕ್ಕೆ ಈ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.

ಗಲಾಟೆ ನಡೆದ ಮೇಲೆ ಸಚಿನ್ 112ಕ್ಕೆ ಕರೆ ಮಾಡಿ ಪೊಲೀಸರಿಗೆ ತಿಳಿಸಿದ್ದರಿಂದ ಮತ್ತಷ್ಟು ಕೋಪಗೊಂಡ ದುಷ್ಕರ್ಮಿಗಳು ಸಚಿನ್ ಮೇಲೆ ಮಾರಕಾಸ್ತ್ರಗಳಿಂದ ಹೊಟ್ಟೆಯ ಭಾಗಕ್ಕೆ ಇರಿದಿದ್ದಾರೆ. ತಕ್ಷಣ ಆತನನ್ನು ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಚಿನ್ ಮೃತಪಟ್ಟಿದ್ದಾನೆ. ಕೊಲೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ.









ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 










