ಕಲ್ಪ ಮೀಡಿಯಾ ಹೌಸ್ | ಬೀದರ್ |
ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಪಶುಸಂಗೋಪನೆ ಸಚಿವ ವೆಂಕಟೇಶ ಅವರ ಹೇಳಿಕೆ ಮಾಜಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತೀವ್ರವಾಗಿ ಖಂಡಿಸಿದ್ದಾರೆ.
ಬೀದರ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ನೀಡಿ ಅಧಿಕಾರ ಹಿಡಿದ ಕಾಂಗ್ರೆಸ್ ಮೊದಲು ಯಾವುದೆ ಷರತ್ತುಗಳಿಲ್ಲದೆ ಗ್ಯಾರಂಟಿ ಇಡೆರಿಸುವತ್ತ ಗಮನಹರಿಸಲಿ ಎಂದಿದ್ದಾರೆ.

Also read: ಜುಲೈ 7ರಂದು ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಲಿ ಪಶುಸಂಗೋಪನೆ ಸಚಿವ ವೇಂಕಟೇಶ್ ಅವರು ಮೆಂಟಲ್ ರೀತಿ ಹೇಳಿಕೆ ನೀಡುವ ಬದಲು ಮೊದಲು ರಾಜ್ಯ ಪ್ರವಾಸ ಮಾಡಲಿ, ಇಲಾಖೆಯ ಸಭೆ ನಡೆಸಲಿ, ಗೋಶಾಲೆ ಭೇಟಿ ನಿಡಿ ಸ್ಥಿತಿಗತಿ ತಿಳಿದುಕೊಳ್ಳಲಿ. ಮುಖ್ಯಮಂತ್ರಿ ಸಿದ್ದರಾಮಯ್ಯಾ ನವರು ಅವರ ಖಾತೆ ಬದಲಾಯಿಸಲಿ ಅಥವಾ ಅವರಿಂದ ರಾಜಿನಾಮೆ ಪಡೆದುಕೊಳ್ಳಲಿ ಎಂದು ಆಗ್ರಹಿಸಿದರು.
ಮುಸ್ಲಿಂ ಸಮಾಜಕ್ಕೆ ಖುಷ್ ಮಾಡಲು ಕಾಂಗ್ರೆಸ್ ಈ ರೀತಿ ಮಾಡುತ್ತಿದೆ:
ಗೋಹತ್ಯೆ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಕಾಂಗ್ರೆಸ್ ಮುಂದಾದರೆ ರಾಜ್ಯದ ಮಠಾದೀಶರು, ಬಿಜೆಪಿ ಪಕ್ಷದ ಕಾರ್ಯಕರ್ತರು ರಾಜ್ಯಾಧ್ಯಂತ ಉಗ್ರ ಹೋರಾಟ ಮಾಡಲಿದ್ದಾರೆ ಅಂತ ಸರ್ಕಾರಕ್ಕೆ ಎಚ್ಚರಿಸಿದರು
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post