ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ
ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು. ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.
ಬಿಜೆಪಿಗೆ ನೈತಿಕ ಹಕ್ಕಿಲ್ಲ;
ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. 10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಾರೆ ಎಂದರು.
ಬಿಜೆಪಿ ಜನವಿರೋಧಿ ಪಕ್ಷ
ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸಯೂ ತಂದು ಹೊರಟರು. ನಮಗೆ ಈಗ ಪಾಠ ಹೇಳಿಕೊಡಲು ಬರುತ್ತಾರೆ ಎಂದರು. 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು. ನಮ ಸರ್ಕಾರ 15 ದಿನಗಳೊಳಗೆ ಎಲ್ಲಾ 15 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು












Discussion about this post