ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಶಿಕಾರಿಪುರ ರಸ್ತೆಯ ಕಲ್ಲಾಪುರ ಗ್ರಾಮದ ಬಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲ್ಲಾಪುರ ಬಳಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನ್ಯಾಮತಿ ತಾಲೂಕಿನ ಬೆಳಗುತ್ತಿಯ ವಿರೂಪಾಕ್ಷಪ್ಪ ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ.
ರಸ್ತೆ ಬದಿ ನಿಂತಿದ್ದ ಲಾರಿ ಹುಬ್ಬಳ್ಳಿಯ ಜಾವೂರಿನದ್ದು ಎಂದು ಹೇಳಲಾಗಿದೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Also read: ಕೋಣನಕುಂಟೆಯ ರಾಯರ ಮಠದಲ್ಲಿ ಪರಿಸರ ದಿನಾಚರಣೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















