ಶಾಸಕ ಎಸ್.ಎನ್. ಚನ್ನಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗೋವಿಂದರಾಜ್ ಕುಟುಂಬ ಕಳೆದ 30 ವರ್ಷಗಳಿಂದ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಕ್ರೀಡೆಗೆ ಮತ್ತು ವಿದ್ಯೆಗೆ ಪ್ರೋತ್ಸಾಹಿಸುತ್ತಾ ಬಂದಿದೆ. ಅವರ ಈ ಕಾರ್ಯ ನಿರಂತರವಾಗಿ ಮುಂದುವರೆಯಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜದ ಪ್ರಮುಖರಾದ ಎನ್. ಉಮಾಪತಿ, ಮಾಜಿ ಕಾರ್ಪೊರೇಟರ್ ಮೋಹನ್ ರೆಡ್ಡಿ. ಉದ್ಯಮಿ ಉದಯ್ ಕಡಂಬ. ಮಾಜಿ ನಗರಸಭಾ ಅಧ್ಯಕ್ಷ ಎನ್.ಜೆ. ರಾಜಶೇಖರ್, ನಿವ್ರತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಎಸ್. ನಾಗರಾಜ್, ಹೆಚ್.ಎನ್. ದೇವರಾಜ್ ಪಾಲಿಕೆ ಸದಸ್ಯರಾದ ಮೀನಾಕ್ಷಿ ಗೋವಿಂದರಾಜ್. ಆಯೋಜಕರಾದ ಗೋವಿಂದರಾಜ್ ಮತ್ತು ಕಿರಣ್ ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















