ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ತಕ್ಷಣ ಮುಚ್ಚುವ ಆದೇಶದ ಪ್ರಕ್ರಿಯೆ ಸ್ಥಗಿತಗೊಳಿಸಿ ಪುನಶ್ಚೇತನಕ್ಕೆ ಮುಂದಾಗಬೇಕು. ಹಾಗೂ ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಮನವಿ ಸಲ್ಲಿಸಲಾಯಿತು.
ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ಕಾರ್ಮಿಕರ ನಿಯೋಗ ದೆಹಲಿಯಲ್ಲಿ ಮಂಗಳವಾರ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್‌ರವರನ್ನು ಭೇಟಿ ಮಾಡಿ, ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳ್ಳುತ್ತಿದ್ದು, ಒಂದರ ನಂತರ ಒಂದು ಘಟಕ ಮುಚ್ಚುತ್ತಿವೆ. ಇದರಿಂದ ಗುತ್ತಿಗೆ ಕಾರ್ಮಿಕರು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರ್ ಆರಂಭಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.
ಕಳೆದ 3 ದಿನದ ಹಿಂದೆ ಕಾರ್ಮಿಕರ ನಿಯೋಗ ಶಿವಮೊಗ್ಗದಲ್ಲಿ ಸಂಸದರನ್ನು ಭೇಟಿ ಮಾಡಿ ಅಳಲನ್ನು ತೋರ್ಪಡಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಂಸದರು ಕಾರ್ಮಿಕರ ನಿಯೋಗ ದೆಹಲಿಗೆ ಬರುವಂತೆ ಸೂಚಿಸಿದ್ದರು.
Also read: ಮೋದಿಯವರು 2024ರಲ್ಲಿ ಭಾರಿ ಬಹುಮತದೊಂದಿಗೆ, ಮೂರನೇ ಅವಧಿಗೆ ಪ್ರಧಾನಿಯಾಗಲಿದ್ದಾರೆ: ಅಮಿತ್ ಶಾ
ಈ ಸಂದರ್ಭದಲ್ಲಿ ಯುವ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ರಾಕೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post