ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು ಎಂದು ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷರಾದ ಜೆಸಿ ಅಶ್ವಿನಿ ಚಂದ್ರಶೇಖರ್ ಹೇಳಿದರು.
ನಗರದ ಅಶಾಜ್ಯೋತಿ ಸ್ವಯಂ ಸೇವಕ ರಕ್ತನಿಧಿ ಕೇಂದ್ರದಲ್ಲಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆಯಿಂದ ರಕ್ತದಾನ ಮಾಡುವ ಮೂಲಕ ವಿಶ್ವ ರಕ್ತದಾನಿಗಳ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.
ರಕ್ತದಾನ ಮಾಡುವುದು ಪ್ರತೀ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ. ಆಗಾಗ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ. ರಕ್ತದಾನ ಮಾಡಿದ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ 24 ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ ಎಂದು ತಿಳಿಸಿದರು.
Also read: ತಂತ್ರಜ್ಞಾನ ಮುಂದುವರೆದರೂ ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ: ಡಾ. ಪ್ರಭು ಸಾಹುಕಾರ್ ಅಭಿಮತ
ಹೆಣ್ಣು ಗಂಡು ಎಂಬ ಬೇಧವಿಲ್ಲದೇ 18 ರಿಂದ 60 ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ದಾನಿಯ ದೇಹದ ತೂಕ 45 ಕೆಜಿಗಿಂತ ಹೆಚ್ಚಿರಬೇಕು. ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಂ ಗಿಂತ ಹೆಚ್ಚಿರಬೇಕು ಎಂದು ಮಾಹತಿ ನೀಡಿದರು.
ನವೀನ್ ತಲಾರಿ ಮಾತನಾಡಿ, ಜೆಸಿಐ ಸಂಸ್ಥೆಯಿಂದ ನೀಡ್ ಬ್ಲಡ್ ಕಾಲ್ ಜೆಸಿಸ್ ಎಂಬ ಕಾರ್ಯಕ್ರಮ ಇದ್ದು, ದೇಶದಲ್ಲಿ ಎಲ್ಲೇ ರಕ್ತದ ಅವಶ್ಯಕತೆ ಇದ್ದರೂ ನಮ್ಮ ಜೆಸಿಐ ಭಾರತದ ಸಂಸ್ತೆಯಿಂದ ರಕ್ತ ದಾನಿಗಳು ಸಿಗುತ್ತಾರೆ ಎಂದು ತಿಳಿಸಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ರಕ್ತದ ಗುಂಪಿನ ಪರಿಕ್ಷೆ ಮಾಡಿ, ಯುವಕರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಜೆಸಿ ಅರ್ಚನಾ ಮೂರ್ತಿ, ಡಾ. ಶೋಭಾ ಗಿರೀಶ್, ಕಾರ್ಯಕ್ರಮ ನಿರ್ದೇಶಕರಾಗಿ ಜೆಸಿ ವಿದ್ಯಾಶ್ರೀ, ಜೆಸಿ ಅಶ್ವಿನಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜೆಸಿ ನವೀನ್ ತಲಾರಿ, ಜೆಸಿ ಆಕಿಫ್, ಬ್ಲಡ್ ಬ್ಯಾಂಕ್ ನ ಉಲ್ಲಾಸ್, ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post