ಕಲ್ಪ ಮೀಡಿಯಾ ಹೌಸ್ | ಆಗುಂಬೆ |
ಇಲ್ಲಿನ ಘಾಟ್’ನಲ್ಲಿ ಬಸ್ ಹಾಗೂ ಬೈಕ್ #Bike ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #RoadAccident ಸವಾರ ಸಾವನ್ನಪ್ಪಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಗುಂಬೆ ಘಾಟ್’ನ #AgumbeGhat 12ನೆಯ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕೆಟಿಎಂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಮೃತ ಯುವಕನನ್ನು ಶಶಾಂಕ್, ಗಾಯಾಳು ಯುವತಿಯನ್ನು ನಿರ್ಮಿತಾ ಎಂದು ಗುರುತಿಸಲಾಗಿದೆ. ಇಬ್ಬರೂ ಉಡುಪಿ ಜಿಲ್ಲೆಯ ಬಾರ್ಕೂರು ಮೂಲದವರು ಎಂದು ಹೇಳಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವಾದ ಬೈಕ್’ನಲ್ಲಿ ಯುವಕ-ಯುವತಿ ಶಿವಮೊಗ್ಗದಿಂದ-ಉಡುಪಿಗೆ #Shivamogga ಹಾಗೂ ಬಸ್ ಉಡುಪಿಯಿಂದ #Udupi ಶಿವಮೊಗ್ಗಕ್ಕೆ ತೆರಳುತ್ತಿತ್ತು ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post