ಕಲ್ಪ ಮೀಡಿಯಾ ಹೌಸ್ | ರಾಂಚಿ |
ಮಾವಿನ ಹಣ್ಣುಗಳನ್ನು ಕೀಳುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಸಹೋದರರಿಬ್ಬರು ಹತ್ಯೆಯಾಗಿರುವ ಘಟನೆ ಜಾರ್ಖಂಡ್‌ನ ಪಾಕುರ್‌ನಲ್ಲಿ ನಡೆದಿದೆ.
ಡೇವಿಧನ್ ಮುರ್ಮು ಮತ್ತು ವಕೀಲ ಮುರ್ಮು ಮೃತಪಟ್ಟವರಾಗಿದ್ದು, ಹಣ್ಣನ್ನು ಕೀಳುವ ವಿಚಾರವಾಗಿ ಗಣೇಶಪುರ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದು, ಇಬ್ಬರೂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಗಲಾಟೆಯಲ್ಲಿ ಭಾಗಿಯಾದ ಹೆಚ್ಚಿನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಉಳಿದವರನ್ನು ಪತ್ತೆಹಚ್ಚಲು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಹಾಗೂ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















