ಕಲ್ಪ ಮೀಡಿಯಾ ಹೌಸ್ | ಉಡುಪಿ |
ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ.
ಮುಚ್ಲಕೋಡಿನ ದೇವಸ್ಥಾನಕ್ಕೆ ಭೇಟಿ ನೀಡಿದಾಗ 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿ ಬಿದ್ದಿರುವುದನ್ನು ಕಂಡ ಸ್ವಾಮೀಜಿ ಹಗ್ಗಕ್ಕೆ ಬಕೆಟ್ ಕಟ್ಟಿ ಮೇಲೆತ್ತಲು ಪ್ರಯತ್ನಿಸಿದರು. ಆದರೆ, ಗಾಬರಿಗೊಂಡಿದ್ದ ಬೆಕ್ಕಿನ ಮರಿ ಬಕೆಟ್‌ನಲ್ಲಿ ಬರಲಿಲ್ಲ. ಕೊನೆಗೆ ಸ್ವಾಮೀಜಿಯೇ ಹಗ್ಗದ ಸಹಾಯದಿಂದ ಬಾವಿಗಿಳಿದು ಬೆಕ್ಕಿನ ಮರಿಯನ್ನು ಮೇಲೆತ್ತಿ ರಕ್ಷಣೆ ಮಾಡಿದರು.
Also read: ಜೂ.20, 21 ಪ್ರಧಾನಿ ಮೋದಿ ಅಮೇರಿಕಾ ಪ್ರವಾಸ: ಯಾವೆಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ? ಇಲ್ಲಿದೆ ಮಾಹಿತಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















