ಕಲ್ಪ ಮೀಡಿಯಾ ಹೌಸ್ | ಸೊರಬ |
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪಟ್ಟಣದ ಶ್ರೀ ರಂಗ ಕನ್ವೆನ್ಷನ್ ಹಾಲ್ ನಲ್ಲಿ ಜೂ.20 ರಂದು ಬೆಳಗ್ಗೆ 11ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ 132 ನೇ ಹಾಗೂ ಪ್ರೊ. ಬಿ. ಕೃಷ್ಣಪ್ಪ ಅವರ 85ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ತಾಲೂಕು ಸಂಚಾಲಕ ಮಹೇಶ್ ಶಕುನವಳ್ಳಿ ಹೇಳಿದರು.
ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಿತಿಯ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ಉರಿಲಿಂಗ ಪೆದ್ದಿ ಪೀಠ ಮಹಾಸಂಸ್ಥಾನದ ಶ್ರೀ ಜ್ಞಾನ ಪ್ರಕಾಶ್ ಸ್ವಾಮೀಜಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಸ.ಹ. ಅಧ್ಯಕ್ಷ ಸುದಾಮ್ ದಾಸ್, ಕೆಪಿಸಿಸಿ ಉಪಾಧ್ಯಕ್ಷ ಬಿ.ಗೋಪಾಲ್, ರಾಜ್ಯ ಪ್ರಚಾರ ಸಮಿತಿ ಉಪಾಧ್ಯಕ್ಷ ಹೆಣ್ಣೂರು ಶ್ರೀನಿವಾಸ್, ಪತ್ರಕರ್ತ ಕೆ.ಎಸ್. ಭಾಸ್ಕರ ಶೆಟ್ಟಿ, ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಮಲ್ಲಪ್ಪ ಹಾಸನ, ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ಜಿಲ್ಲಾ ಸಂಚಾಲಕ ಚನ್ನಯ್ಯ, ಜಿಲ್ಲಾ ಸಂಘಟನಾ ಸಂಚಾಲಕ ಬಿ. ಬಂಗಾರಪ್ಪ ನಿಟ್ಟಕ್ಕಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನಿಸಲಾಗುತ್ತಿದ್ದು, ಓ.ಎನ್.ಜಿ.ಸಿ ನಿವೃತ್ತ ಸಮೂಹ ಪ್ರಧಾನ ವ್ಯವಸ್ಥಾಪಕ ಡಾ. ಎಂ. ಷಣ್ಮಖಪ್ಪ, ವಲಯ ಅರಣ್ಯಾಧಿಕಾರಿ ಜಾವೆದ್ ಭಾಷಾ ಅಂಗಡಿ, ಪಿಡಿಓ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಹೋಮೇಶ್, ದೈಹಿಕ ಶಿಕ್ಷಕ ಪಿ.ಧರ್ಮಪ್ಪ ಹಾಗೂ ಸಾವಿತ್ರಿ ಬಾ ಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಶಶಿಕಲಾ ಅವರನ್ನು ಸನ್ಮಾನಿಸಲಾಗುವುದು ಎಂದರು.
Also read: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ: ಮಾಜಿ ಡಿಸಿಎಂ ಈಶ್ವರಪ್ಪ ಭವಿಷ್ಯ
ಸುದ್ದಿ ಗೋಷ್ಠಿಯಲ್ಲಿ ಡಿಎಸ್ಎಸ್ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ಜಿಲ್ಲಾ ಸಂಘಟನಾ ಸಂಚಾಲಕ ಬಿ. ಬಂಗಾರಪ್ಪ ನಿಟ್ಟಕ್ಕಿ, ತಾಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಹುರುಳಿಕೊಪ್ಪ, ಹರೀಶ್ ಚಿಟ್ಟೂರು ಉಪಸ್ಥಿತರಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post