ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಸಮಾಜದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಮುಖ್ಯವಾಹಿನಿಗೆ ತಂದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಕಾರಣಕರ್ತವಾದ ಬಸವತತ್ವವೇ ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ನಿಜವಾದ ಪರಿಹಾರ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ. ವಿ. ಪರಮ ಶಿವಮೂರ್ತಿ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಶಾಸ್ತ್ರ ವಿಭಾಗದ ಶ್ರೀ ಬಸವೇಶ್ವರ ಅಧ್ಯಯನ ಪೀಠದ ವತಿಯಿಂದ ಮಂಗಳವಾರ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮ ಮತ್ತು ಬಸವ ತತ್ವ ಕುರಿತ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

Also read: ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಕೈ ಬೀಡಿ: ವಿಹಿಪ ಆಗ್ರಹ
ಶ್ರೀಸಾಮಾನ್ಯನ ಸರಳಕನ್ನಡದಲ್ಲಿ ವಚನಗಳೆಂಬ ಹೊಸ ಪ್ರಕಾರವನ್ನು ಹುಟ್ಟುಹಾಕಿ ಶ್ರೇಷ್ಠ ಸಾಹಿತ್ಯ ರಚಿಸುವ ಮೂಲಕ ಕನ್ನಡ ಅಸ್ಮಿತೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಬಸವಾದಿ ಶರಣರಿಗೆ ಸಲ್ಲಬೇಕು ಎಂದು ಶ್ಲಾಘಿಸಿದರು.

ವಿಭಾಗದ ಅಧ್ಯಕ್ಷ ಪ್ರೊ. ಗುರುಲಿಂಗಯ್ಯ, ಪ್ರೊ. ಎಸ್. ಚಂದ್ರಶೇಖರ್, ಡಾ. ಈ. ಚಂದ್ರಶೇಖರ್, ಪ್ರೊ. ಅಂಜನಪ್ಪ, ಪ್ರೊ. ಪ್ರಶಾಂತ್ ನಾಯಕ್, ಶುಭಾ ಮರವಂತೆ ಮತ್ತಿತರರು ಉಪಸ್ಥಿತರಿದ್ದರು.











Discussion about this post