ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅಬ್ಬಲಗೆರೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಹುಣಸೋಡು ಗ್ರಾಮದ ಸೀತಾ ಬಾಯಿ (50) ಆತ್ಮಹತ್ಯೆಗೆ ಯತ್ನಿಸಿದ್ದು, ಕಾರು ಚಾಲಕನ ಕೆಲಸ ಕೊಟ್ಟ ಮನೆ ಮಾಲೀಕನ ಪತ್ನಿಯನ್ನು ತನ್ನ ಮಗ ಕೊಲೆ ಮಾಡಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಕಮಲಮ್ಮ ಎಂಬುವರನ್ನು ಕೊಲೆ ಮಾಡಲಾಗಿತ್ತು ಈ ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ಕಮಲಮ್ಮ ನವರನ್ನು ಕೊಲೆಗೈದು ಸುಮಾರು 35 ಲಕ್ಷ ಹಣವನ್ನು ದೋಚಲಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗದ ತುಂಗಾನಗರ ಪೊಲೀಸರು ಆರೋಪಿ ಹನುಮಂತ ನಾಯ್ಕನಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಮಗ ಹನುಮಂತ ನಾಯ್ಕ , ಪತಿ ರೂಪ್ಲಾ ನಾಯ್ಕ ಇಬ್ಬರು ಮನೆ ಬಿಟ್ಟು ಪರಾರಿಯಾಗಿದ್ದಾರೆ.
Also read: ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ಕೈಗಾರಿಕೋದ್ಯಮಿಗಳ ಪ್ರತಿಭಟನೆ
ಮೆಗ್ಗಾನ್ ಆಸ್ಪತ್ರೆಯಲ್ಲಿ ಸೀತಾ ಬಾಯಿ ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಸೀತಾಬಾಯಿ ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post