ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಲೆನಾಡಿನ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು ಶರಾವತಿ ಹಿನ್ನಿರಿನ ಪ್ರದೇಶಕ್ಕೆ ಆದ್ಯತೆ ನೀಡಿ ಡಿಸೆಂಬರ್ ಮುಕ್ತಾಯಕ್ಕೆ 35 ಟವರ್ ನಿರ್ಮಾಣ ಮಾಡುವುದಾಗಿ ಸಂಸದ ಬಿ. ವೈ. ರಾಘವೇಂದ್ರ MP Raghavendra ಹೇಳಿದರು.
ಎಸ್ ಎಸ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪದ ವಿಕಾಸ ತೀರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಎಸ್ಎನ್ಎಲ್ ಸಮಸ್ಯೆ ಇತ್ಯರ್ಥಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಗುಣಮಟ್ಟದ ನೆಟ್ವರ್ಕ್ ನೀಡಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ರಾಜ್ಯದಲ್ಲಿ ವಿಶೇಷವಾಗಿ ಸಾಗರ ಮತ್ತು ಹೊಸನಗರ ಭಾಗಕ್ಕೆ ಹೆಚ್ಚಿನ ಬಿಎಸ್ಎನ್ಎಲ್ ಟವರ್ ಮಂಜೂರಾತಿ ಮಾಡಲಾಗಿದೆ ಎಂದರು.
ರೈತರ ಬೆಳೆ ವಿಮೆ ವಿಚಾರವಾಗಿ ಮಾತನಾಡಿದ ಅವರು, ಮೂರು ವರ್ಷಕ್ಕೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಬೆಳೆ ವಿಮಾ ಕಂಪನಿಗಳಿಂದ ಟೆಂಡರ್ ಕರೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹೊಸ ಟೆಂಡರ್ ಪ್ರಕ್ರಿಯೆ ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು, ತಿಂಗಳ ಒಳಗೆ ಸಮಸ್ಯೆ ಬಗೆಹರಿಸುವ ವಿಶ್ವಾಸವಿದೆ ಎಂದರು.
Also read: ಬಘೇಲ್ ಸರ್ಕಾರ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಂಪೂರ್ಣ ವಿಫಲವಾಗಿದೆ: ಅಮಿತ್ ಶಾ
ಜಿಲ್ಲೆಯಲ್ಲಿ 5 ರೈಲ್ವೆ ನಿಲ್ದಾಣ. 100 ಕೋಟಿ ರು ಅನುದಾನ ಮಂಜೂರಾಗಿದ್ದು. ಅರಸಳಿನ ಮಾಲ್ಗುಡಿ ಡೇಸ್ ಟೇಷನ್ ಅಭಿವೃದ್ಧಿಪಡಿಸಲಾಗಿದೆ. ಇಲ್ಲಿ ರೈಲು ನಿಡುಗಾಡಿಗೆ ಈಗಾಗಲೇ ಮನವಿ ಬಂದಿದ್ದು, ಇದರ ಬಗ್ಗೆ ಗಮನ ಹರಿಸಲಾಗುವುದು ಎಂದರು.
ಜೋಗ ಅಭಿವೃದ್ಧಿ ಕಾಮಗಾರಿ ಕೂಡ ನಡೆಯುತ್ತಿದೆ. ಸಿಗಂದೂರು ಸೇತುವೆ ಕಾಮಗಾರಿ ಮುಂದಿನ ಸಿಗಂದೂರು ಸೇತುವೆ ಕಾಮಗಾರಿ ಮುಂದಿನ ಜುಲೈ ವೇಳೆಗೆ ಮುಗಿಯಬೇಕಾಗಿತ್ತು. ಆದರೂ ನಮ್ಮ ಮನವಿಗೆ ಸ್ಪಂದಿಸಿರುವ ಗುತ್ತಿಗೆದಾರರು 2024 ರ ಜನವರಿ ಇಲ್ಲವೇ ಫೆಬ್ರವರಿ ವೇಳೆಗೆ ಕಾಮಗಾರಿ ಮುಗಿಸಿಕೊಡುವ ಭರವಸೆ ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಉಪ ವಿಭಾಗ ಅಧಿಕಾರಿಗಳು, ಡಿಎಫ್ಓ, ಬಿಎಸ್ಎನ್ಎಲ್ ಅಧಿಕಾರಿಗಳು, ಅರಣ್ಯ ಅಧಿಕಾರಿಗಳು ಸೇರಿದಂತೆ ಮಾಜಿ ಶಾಸಕ ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ ಮತ್ತು ಪ್ರಸನ್ನ ಕೆರೆ ಕೈ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















