ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಜಿಲ್ಲೆಯ ಹಿರಿಯ ಪತ್ರಕರ್ತ, ಅಜೇಯ ಪತ್ರಿಕೆಯ ಸಂಪಾದಕ ಎಂ. ಶ್ರೀನಿವಾಸನ್ ಅವರಿಗೆ ವಿಶ್ವ ಸಂವಾದ ಕೇಂದ್ರದ ವತಿಯಿಂದ ನೀಡಲಾಗುವ ವಾರ್ಷಿಕ ವಿಎಸ್’ಕೆ ಮಾಧ್ಯಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಶ್ವ ಸಂವಾದ ಕೇಂದ್ರ ಕರ್ನಾಟಕದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ.
ತಿ.ತಾ.ಶರ್ಮಾ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರಜಾವಾಣಿಯ ರವಿಪ್ರಕಾಶ್ ಎಸ್ ಹಾಗೂ ಸುವರ್ಣ ವಾಹಿನಿಯ ಜಯಪ್ರಕಾಶ್ ಶೆಟ್ಟಿ, ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಶಿವಮೊಗ್ಗದ ಅಜೇಯ ಪತ್ರಿಕೆಯ ಸಂಪಾದಕ ಎಂ. ಶ್ರೀನಿವಾಸನ್, ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ಅಂಕಣಕಾರ ಹೆಬ್ರಿ ಬಾಲಕೃಷ್ಣ ಮಲ್ಯ ಹಾಗೂ ವಿಕ್ರಮ ವಾರಪತ್ರಿಕೆಯ ಅಂಕಣಕಾರ ಕಾ. ರಮಾನಂದ ಆಚಾರ್ಯ, ವಿ.ಎಸ್.ಕೆ. ಡಿಜಿಟಲ್ ಮಾಧ್ಯಮ ಪ್ರಶಸ್ತಿಯನ್ನು ಮೀಡಿಯಾ ಮಾಸ್ಟರ್ಸ್ ಸಂಪಾದಕ ಎಂ. ಎಸ್. ರಾಘವೇಂದ್ರ ಸ್ವೀಕರಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು.
Also read: ನಿಲ್ಲಿಸದ ಹಿನ್ನೆಲೆ: ಸರ್ಕಾರಿ ಬಸ್’ಗೆ ಕಲ್ಲು ಎಸೆದು 5 ಸಾವಿರ ರೂ. ದಂಡ ತೆತ್ತು ಪ್ರಯಾಣಿಸಿದ ಮಹಿಳೆ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ಹಿರಿಯ ಅಂಕಣಕಾರರಾದ ಡಾ. ಶ್ರೀನಿವಾಸ ಬಳ್ಳಿ ಉಪನ್ಯಾಸ ನೀಡಿದರು. ವಿಶ್ವ ಸಂವಾದ ಕೇಂದ್ರದ ಅಧ್ಯಕ್ಷ ಡಾ.ಶ್ರೀಧರ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















