ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಖ್ಯಾತ ಹಿರಿಯ ವೈದ್ಯ ಡಾ.ಕೆ.ಜಿ. ಭಟ್(67) ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಿನ್ನೆ ರಾತ್ರಿ ಒಂದೂವರೆ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ.
ಇವರು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಗುರುವಾರ ಮಧ್ಯಾಹ್ನ 3 ಗಂಟೆಗೆ ಹಿಂದೂ ರುದ್ರ ಭೂಮಿಯಲ್ಲಿ ನಡೆಯಲಿದೆ.
ಕೆ.ಜಿ. ಭಟ್ ಅವರು ವಿಐಎಸ್’ಎಲ್ #VISL ಆಸ್ಪತ್ರೆಯಲ್ಲಿ ವೈದ್ಯರಾಗಿ, ನಿವೃತ್ತಿ ನಂತರ ಖಾಸಗಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇವರ ಪತ್ನಿ ಡಾ.ಕವಿತಾ ಭಟ್ ಅವರು ಕಳೆದ ಡಿಸೆಂಬರ್ 26ರಂದು ಹೃದಯಾಘಾತದಿಂದ ನಿಧನರಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post