ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ದಿನ ಕಳೆದಂತೆ ಒಂದೊಂದು ಘಟಕಗಳು ಉತ್ಪಾದನೆ ಸ್ಥಗಿತಗೊಳ್ಳುತ್ತಿರುವುದನ್ನು ವಿರೋಧಿಸಿ ಗುತ್ತಿಗೆ ಕಾರ್ಮಿಕ ಸಂಘಟನೆಗಳು ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದವು.
ಕಳೆದ 2 ದಿನಗಳ ಹಿಂದೆ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಖಾನೆ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿ ಉತ್ಪಾದನೆ ಸ್ಥಗಿತಗೊಳಿಸದೆ ಗುತ್ತಿಗೆ ಕಾರ್ಮಿಕರ ಹಿತಕಾಪಾಡುವಂತೆ ಆಗ್ರಹಿಸಿದ್ದರು. ಆದರೆ ಆಡಳಿತ ಮಂಡಳಿ ಅಸಹಾಯಕತೆ ವ್ಯಕ್ತಪಡಿಸಿದ್ದು, ಮೇಲಾಧಿಕಾರಿಗಳು ಈಗಾಗಲೇ ಉತ್ಪಾದನೆ ಸ್ಥಗಿತಗೊಳಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ಕಚ್ಚಾ ಸಾಮಾಗ್ರಿಗಳು ಸಹ ಸ್ಥಗಿತಗೊಂಡಿದ್ದು, ಈ ಹಿನ್ನಲೆಯಲ್ಲಿ ಉತ್ಪಾದನೆ ಮುಂದುವರೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ಮಳೆಯಲ್ಲಿಯೇ ಪ್ರತಿಭಟನೆ ಮುಂದುವರೆಸಿದರು. ಈ ನಡುವೆ ಪ್ರತಿಭಟನೆ ತೀವ್ರಗೊಳ್ಳುತ್ತಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















