ಮಣಿಪಾಲ್ ಆರೋಗ್ಯ ಕಾರ್ಡ್ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದರ ಸದುಪಯೋಗವನ್ನು ಶಿವಮೊಗ್ಗ ಸುತ್ತಮುತ್ತಲ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ.ಎಂ.ಎ. ಪೈ ಅವರ 125ನೇ ವರ್ಷದ ಜನ್ಮದಿನಾಚರಣೆಯನ್ನು ನಾವು ಆಚರಿಸುತ್ತಿದ್ದೇವೆ. ಇವರ ನೆನಪಿಗಾಗಿ ಎಲ್ಲರಿಗೂ ಸುಲಭ ದರದಲ್ಲಿ ಆರೋಗ್ಯ ಲಭಿಸಬೇಕು ಎಂಬ ಹಿನ್ನೆಲೆಯಲ್ಲಿ ಈಗಾಗಲೇ ಜನಪ್ರಿಯವಾಗಿರುವ ಮಣಿಪಾಲ್ ಆರೋಗ್ಯ ಕಾರ್ಡಿನ ನೋಂದಣಿಯನ್ನು ಈಗ ಆರಂಭಿಸುತ್ತಿದ್ದೇವೆ. ಸಾರ್ವಜನಿಕರು ಆಸ್ಪತ್ರೆಯ ಅಧಿಕೃತ ಪ್ರತಿನಿಧಿಗಳ ಬಳಿ ಅಥವಾ ಆನ್‍ಲೈನ್ ಮೂಲಕವೂ ನೊಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.

ಮಣಿಪಾಲ್ ಆರೋಗ್ಯ ಕಾರ್ಡ್ 2022ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 300, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ. 600 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ)ರೂ. 750. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ.500, ಕುಟುಂಬಕ್ಕೆ ರೂ. 800 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 950 ಆಗಿರುತ್ತದೆ ಎಂದರು.

ಅಲ್ಲದೆ ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯಿತಿ ಪ್ರಯೋಜನಗಳನ್ನು ಪಡೆಯಬಹುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮಣಿಪಾಲ ಆರೋಗ್ಯ ಕಾರ್ಡಿನ ಮುಖ್ಯ ಸಂಯೋಜಕ ನವೀನ್ ಕೆ. ಇದ್ದರು.

ಕಸ್ತೂರಬಾ ಆಸ್ಪತ್ರೆ ಮಾಹಿತಿ ಕೇಂದ್ರ, ನವೀನ್ ಟೈರ್ಸ್, ವಿನೋಭನಗರ ನವೀನ್ ಕೆ.ಆರ್. 78295 40338, ಪ್ರತಿನಿಧಿಗಳಾದ ವಿಜಯ್ ಆನಂದ್ 9844383344, ಬಾಪೂಜಿ ಎಂ. 9916131880, ವಿಪ್ರ ಸೌಹಾರ್ದ 38423 ಸೌಹಾರ್ದ 9249300000 0604, ಕೃಷಿಕ ಸೌಹಾರ್ದ 9686264966, ಶಾರದಾ ಸೌಹಾರ್ದ 9880838430, ಮತ್ತು ಹತ್ತಿರದ ಪ್ರತಿನಿಧಿಗಳಲ್ಲಿ ನೊಂದಾಯಿಸಿಕೊಳ್ಳಬಹುದು.









Discussion about this post