ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
2022 – 23 ರ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಗರದ ಗಾಡಿಕೊಪ್ಪದಲ್ಲಿರುವ ಜ್ಞಾನಗಂಗಾ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳೂ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವುದರಿಂದ ಶಾಲೆಗೆ ಶೇ.100% ಫಲಿತಾಂಶ ದಾಖಲಿಸಿದ್ದು, ಈ ಸಾಧನೆಯನ್ನು ಗುರುತಿಸಿ ಶಿಕ್ಷಣ ಇಲಾಖೆಯು ಅಭಿನಂದನೆಗಳನ್ನು ಸಲ್ಲಿಸುವ ಮೂಲಕ ನೆನಪಿನ ಗೌರವ ಸ್ಮರಣಿಕೆಯನ್ನು ನೀಡಿ ಗೌರವಿಸಿದೆ.
ಇದಕ್ಕೆ ಕಾರಣಕರ್ತರಾದ ಎಲ್ಲಾ ವಿದ್ಯಾರ್ಥಿಗಳಿಗೆ, ಮಾರ್ಗದರ್ಶನ ಮಾಡಿದ ಎಲ್ಲಾ ಶಿಕ್ಷಕರಿಗೆ, ಶಾಲೆಯ ಪ್ರಾಂಶುಪಾಲರಿಗೆ ಹಾಗೂ ಜ್ಞಾನಗಂಗಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಗೆ ಶಾಲಾ ಶಿಕ್ಷಣ ಇಲಾಖೆಯು ಅಭಿನಂದನೆಯನ್ನು ಸಲ್ಲಿಸುವ ಮುಖಾಂತರ ಗೌರವ ಸ್ಮರಣಿಕೆಯನ್ನು ಕೊಟ್ಟು ಗೌರವಿಸಿದೆ.
ಜಿಲ್ಲಾ ಶಿಕ್ಷಣಾಧಿಕಾರಿ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರ ಉಪಸ್ಥಿತಿಯಲ್ಲಿ ಗೌರವ ಸ್ಮರಣಿಕೆ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಸಿಬ್ಬಂದಿಗಳು, ಜ್ಞಾನಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರು ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















