ಹೊಸತನದ ಸಂಶೋಧನೆ ಮತ್ತು ನಾವೀನ್ಯ ಬದಲಾವಣೆಗಳ ಮೂಲಕ ಎಲ್ಲಾ ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲವಾಗಿದೆ ಎಂದು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ಮಂಜುನಾಥ ಹೇಳಿದರು.


Also read: ಸಮನ್ವಯ ಫೆಸ್ಟ್: ಭದ್ರಾವತಿ ಸರ್. ಎಂ. ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ
ಆಪ್ಷನ್ ಎಂಟ್ರಿ ವೇಳೆ ಎಚ್ಚರವಿರಲಿ:
ಸಿಇಟಿ ಮೂಲಕ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆಪ್ಷನ್ ಎಂಟ್ರಿ ಮುಖ್ಯ ಘಟ್ಟವಾಗಿದ್ದು, ಆಯ್ಕೆ ಪ್ರಕ್ರಿಯೆಯ ವೇಳೆ ಎಚ್ಚರಿಕೆಯಿಂದಿರಿ ಎಂದು ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ನರೇಂದ್ರ ಮಾಹಿತಿ ನೀಡಿದರು.

- ಆಪ್ಷನ್ ಎಂಟ್ರಿ ಮಾಡುವ ಮುನ್ನ ಕೆಇಎ ನೀಡುವ ಸೀಕ್ರೆಟ್ ಕೀ ಭದ್ರವಾಗಿ ಕಾಪಾಡಿಕೊಳ್ಳಿ.
- ಜು.15 ನಂತರ ಪ್ರತಿದಿನ ಕೆಇಎ ವೆಬ್ಸೈಟ್ ಭೇಟಿ ನೀಡಿ ಹೊಸ ಪ್ರಕಟಣೆಗಳ ಬಗ್ಗೆ ತಿಳಿದುಕೊಳ್ಳಿ.
- ಕಾಲೇಜುಗಳ ಮಾನ್ಯತೆ, ಬೋಧನಾ ಕ್ರಮ, ಉದ್ಯೋಗವಕಾಶ, ಹಾಸ್ಟಲ್ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಿ.
- ಕೋರ್ಸ್ ಮುಖ್ಯವೊ ಕಾಲೇಜು ಮುಖ್ಯವೊ ಎಂದು ಈಗಲೇ ನಿರ್ಧರಿಸಿಕೊಳ್ಳಿ.
- ಕೆಇಎ ವೆಬ್ಸೈಟ್ ಮೂಲಕ ಹಿಂದಿನ ವರ್ಷಗಳ ಕಾಲೇಜು ಮತ್ತು ಕೋರ್ಸ್‌ಗಳ ಕಟ್ಆಫ್ ತಿಳಿಯಿರಿ.
- ಸೀಟ್ ಮ್ಯಾಟ್ರಿಕ್ಸ್ ಗಳ ಬಗ್ಗೆ ತಿಳಿದುಕೊಳ್ಳಿ.
- ಶುಲ್ಕ ಪಾವತಿಸುವ ಚಲನ್ ಗಳನ್ನು ನಿಮ್ಮ ಖಾತೆಯಿರುವ ಬ್ಯಾಂಕ್ ಗಳಿಂದ ಪಾವತಿಸಿ.
- ಕೆಇಎ ನೀಡುವ ಕಾಲೇಜು ಪ್ರವೇಶಾತಿ ಆದೇಶ ಮರೆಯದೆ ಡೌನ್‌ಲೋಡ್ ಮಾಡಿಕೊಳ್ಳಿ.
ಕಾರ್ಯಕ್ರಮದಲ್ಲಿ ಜೆ.ಎನ್.ಎನ್.ಸಿ.ಇ ಪ್ರವೇಶಾತಿ ಸಮಿತಿ ಮುಖ್ಯಸ್ಥರಾದ ಡಾ.ಸುರೇಂದ್ರ, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮೋಯಿನುದ್ದಿನ್ ಖಾನ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಸಂಜೀವ್ ಕುಂಟೆ, ಡಾ.ಎಸ್.ವಿ.ಸತ್ಯನಾರಾಯಣ, ಡಾ.ತೇಜಸ್ವಿ, ಡಾ.ಈ.ಬಸವರಾಜ್, ಡಾ.ನಿರ್ಮಲಾ, ಡಾ.ಆನಂದರಾಮ್, ಪ್ರವೇಶಾತಿ ಸಮಿತಿಯ ಹರೀಶ್.ಎಸ್.ಬಿ, ಶಿವಾನಂದಪ್ಪ, ಮಂಜುನಾಥ ಆಚಾರ್, ಸಾಗರ್, ಅಭಿಜಿತ್, ಹೇಮಲತಾ, ಲೋಕೇಶ್, ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರವೇಶಾತಿ, ಆಪ್ಷನ್ ಎಂಟ್ರಿ ಕುರಿತ ಗೊಂದಲಗಳ ಕುರಿತು ಚರ್ಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















