No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥರ ಚಾತುರ್ಮಾಸ್ಯ

ಜುಲೈ 11 ಶ್ರೀಗಳ ಪುರಪ್ರವೇಶ, 12ರಂದು ವ್ರತ ಸಂಕಲ್ಪ

kalpa News by kalpa News
July 10, 2023
in ಶಿವಮೊಗ್ಗ
0
ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥರ ಚಾತುರ್ಮಾಸ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಹೊಳೆಹೊನ್ನೂರು |

ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಮದುತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ತಮ್ಮ 28ನೇ ಚಾತುರ್ಮಾಸ್ಯ ವ್ರತವನ್ನು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕ್ಷೇತ್ರದಲ್ಲಿ ಕೈಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀಪಾದಂಗಳವರು ಜು.11ರ ಮಂಗಳವಾರ ಸಂಜೆ 5 ಗಂಟೆಗೆ ಹೊಳೆಹೊನ್ನೂರು ಪುರಪ್ರವೇಶ ಮಾಡಲಿದ್ದಾರೆ. ಹೊಳೆಹೊನ್ನೂರು ಸರ್ಕಲ್‌ನಿಂದ ಶ್ರೀಮನ್ ಮೂಲಸೀತಾ ರಾಮಚಂದ್ರ ದೇವರು ಹಾಗೂ ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಗುವುದು. ಬಳಿಕ ಶ್ರೀಪಾದರು ಬೃಂದಾವನದಲ್ಲಿ ಸನ್ನಿಹಿತರಾಗಿರುವ ತಮ್ಮ ಪರಂಪರೆಯ ಪೂರ್ವಗುರುಗಳಾದ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರ ಮೂಲ ಬೃಂದಾವನದ ದರ್ಶನಾಶೀರ್ವಾದ ಪಡೆಯಲಿದ್ದಾರೆ.
ಆನಂತರ ವಿದ್ವತ್ ಸಭಾ ಕಾರ್ಯಕ್ರಮವಿದೆ. ಜು.12ರಂದು ಶ್ರೀ ಸತ್ಯಧರ್ಮ ತೀರ್ಥರ ಅನುಗ್ರಹದೊಂದಿಗೆ ಶ್ರೀ ಸತ್ಯಾತ್ಮ ತೀರ್ಥರು ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಲಿದ್ದಾರೆ.

ಈ ಬಾರಿ 80 ದಿನ ಚಾತುರ್ಮಾಸ್ಯ..!
ಈ ಸಂವತ್ಸರದಲ್ಲಿ ಶ್ರಾವಣ ಮಾಸ ಅಧಿಕ ಮಾಸ ಬಂದಿರುವುದರಿಂದ ಚಾತುರ್ಮಾಸ್ಯದ ಅವಧಿಯೂ ವಿಸ್ತಾರವಾಗಿದೆ. ಸಾಮಾನ್ಯವಾಗಿ 52 ದಿನಗಳ ಕಾಲ ನಡೆಯುವ ಚಾತುಮಾಸ್ಯ ಅಧಿಕ ಮಾಸದ ಕಾರಣದಿಂದ 80 ದಿನಗಳ ಕಾಲ ನಡೆಯಲಿದೆ. ಅಧಿಕ ಮಾಸದಲ್ಲಿ ಮಾಡುವ ಧಾರ್ಮಿಕ ಕೆಲಸಗಳು ವಿಶೇಷ ಪುಣ್ಯ ನೀಡಲಿದೆ ಎಂಬ ನಂಬಿಕೆ ಇದೆ. ಹೀಗಾಗಿ ಅಧಿಕ ಮಾಸದ ಸಂದರ್ಭದಲ್ಲಿ ಶ್ರೀಗಳು ಈ ಭಾಗದಲ್ಲಿ ವ್ರತ ಕೈಗೊಂಡಿರುವುದು ಭಕ್ತರ ಸಂತಸವನ್ನು ಇಮ್ಮಡಿಗೊಳಿಸಿದೆ ಮತ್ತು ಗುರುಗಳ ಸೇವೆಗೆ ವಿಶೇಷ ಅವಕಾಶವೂ ದೊರಕಿದಂತಾಗಿದೆ.

Also read: Every startup should have only one leader, not multiple leaders

ಉತ್ತರಾದಿ ಮಠಾಧೀಶರ ಈ ಚಾತುರ್ಮಾಸ್ಯ ಕಾರ್ಯಕ್ರಮ ಜು.12ರಿಂದ ಸೆ.29ರವರೆಗೆ ಹೊಳೆಹೊನ್ನೂರಿನಲ್ಲಿ ನಡೆಯಲಿದೆ. 80 ದಿನಗಳ ಈ ಅದ್ಧೂರಿಯ ಕಾರ್ಯಕ್ರಮದಲ್ಲಿ ನಾಡಿನ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿದಿನ ಶ್ರೀಗಳಿಂದ ಸಂಸ್ಥಾನ ದೇವರ ಪೂಜೆ, ವಿವಿಧ ವಿದ್ವಾಂಸರಿಂದ ಪ್ರವಚನ, ಹಬ್ಬ ಹರಿದಿನಗಳಂದು ವಿಶೇಷ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನಾ ಮಂಡಳಿಗಳಿಂದ ಭಜನೆ, ಲೋಕಕಲ್ಯಾಣಾರ್ಥ ಹೋಮ ಹವನಾದಿಗಳು ನಡೆಯಲಿವೆ. ನಿತ್ಯವೂ ನಡೆಯುವ ವಿದ್ವತ್ ಸಭೆಯ ಕೊನೆಯಲ್ಲಿ ಶ್ರೀ ಸತ್ಯಾತ್ಮ ತೀರ್ಥರು ಅನುಗ್ರಹ ಸಂದೇಶ ನೀಡಲಿದ್ದಾರೆ.
ಚಾತುರ್ಮಾಸ್ಯ ಸಂಬಂಧ ಮಾಹಿತಿಗಾಗಿ ಶ್ರೀನಿವಾಸಾಚಾರ್ಯ ನವರತ್ನ 94810 64750, ಪುರುಷೋತ್ತಮಾಚಾರ್ಯ ನವರತ್ನ – 94837 21572, ರಘೂತ್ತಮಾಚಾರ್ಯ ಸೊಂಡೂರ್ 87624 -06466 ಇವರನ್ನು ಸಂಪರ್ಕಿಸಲು ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

ಶ್ರೀ ಸತ್ಯಧರ್ಮರ ಕುರಿತು
ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠದ ಪರಂಪರೆಯ 28ನೇ ಯತಿಗಳಾದ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರ ಮೂಲ ಬೃಂದಾವನವಿದೆ. ಶ್ರೀ ಸತ್ಯಧರ್ಮರು ಪುರಾಣ ರಾಜರೆನಿಸಿದ ಶ್ರೀಮದ್ ಭಾಗವತ, ರಾಮಾಯಣ, ಮಹಾಭಾರತಗಳಿಗೆ ಅತ್ಯದ್ಭುತವಾಗಿ ಅವರೂಪದ ಶೈಲಿಯಲ್ಲಿ ವ್ಯಾಖ್ಯಾನ ರಚಿಸಿ ವಿದ್ವತ್ ಪ್ರಪಂಚಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಹಾಗೂ ಅನೇಕ ರಸಭರಿತವಾದ ಸುಭಾಷಿತಗಳನ್ನು ರಚಿಸಿ ಜನಸಾಮಾನ್ಯರನ್ನೂ ಅನುಗ್ರಹಿಸಿದ್ದಾರೆ. ಅವರ ಬೃಂದಾವನದ ಎದುರು ಗಂಗಾಧರನ ಪ್ರಾದುರ್ಭಾವವಾಗಿದ್ದು ಅವರ ಮಹಿಮೆಗೆ ಸಾಕ್ಷಿಯಾಗಿದೆ. ಇಂದಿಗೂ ಗಂಗಾಧರನ ದರುಶನವನ್ನು ಪಡೆಯಬಹುದಾಗಿದೆ.
ಶ್ರೀ ಸತ್ಯಾತ್ಮ ತೀರ್ಥರ ಕುರಿತು
ಶ್ರೀ ಸತ್ಯಪ್ರಮೋದ ತೀರ್ಥ ಶ್ರೀಪಾದಂಗಳವರಿಂದ ಸನ್ಯಾಸಾಶ್ರಮ ಪಡೆದ ಶ್ರೀ ಸತ್ಯಾತ್ಮ ತೀರ್ಥರು ಉತ್ತರಾದಿ ಮಠದ 41ನೇ ಯತಿಗಳು. ಬಾಲಯತಿಗಳಾಗಿ ಸನ್ಯಾಸ ಸ್ವೀಕರಿಸಿದ ಶ್ರೀಗಳು ತಮ್ಮ ಅದ್ಭುತ ಪ್ರವಚನ, ಅಪರಿಮಿತ ಪಾಂಡಿತ್ಯ, ತಪಸ್ಸು ಮತ್ತು ಆಶ್ರಮ ಧರ್ಮದ ಪಾಲನೆಯ ವಿಷಯದಲ್ಲಿ ದೇಶ ವಿದೇಶಗಳಲ್ಲಿ ಖ್ಯಾತರಾಗಿದ್ದಾರೆ. ಕೋಟ್ಯಂತರ ಅನುಯಾಯಿಗಳನ್ನು ಹೊಂದಿದ್ದಾರೆ.
ಶ್ರೀಗಳು ಕೇವಲ ೨೨ನೇ ವಯಸ್ಸಿನಲ್ಲಿ ಸನ್ಯಾಸ ಪಡೆದು ವೈರಾಗ್ಯ ಶಿಖಾಮಣಿಗಳೆನಿಸಿದ್ದಾರೆ. ನಿತ್ಯ ಪೂಜೆ ಮತ್ತು ಪಾಠ, ಪ್ರವಚನವನ್ನು ಶ್ರೀಮಠದ ಆನೂಚಾನ ಪರಂಪರೆಯಂತೆ ಮುಂದುವರೆಸಿದ್ದಾರೆ. ಶ್ರೀಮನ್ನ್ಯಾಯಸುಧಾ ಪಾಠ ಮತ್ತು ಮಂಗಳ ಮಹೋತ್ಸವಕ್ಕೆ ಹೊಸ ದಿಕ್ಕನ್ನೇ ನೀಡಿದ್ದಾರೆ. ಸಹಸ್ರಾರು ಯುವಕರು ಇವರ ಪ್ರವಚನಗಳಿಂದ ಪ್ರಭಾವಿತರಾಗಿ ಸನ್ಮಾರ್ಗದತ್ತ ಪರಿವರ್ತನೆಯಾಗಿದ್ದಾರೆ.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: HolehonnuruKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಹೊಳೆಹೊನ್ನೂರು
Share203Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Every startup should have only one leader, not multiple leaders

Next Post

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

kalpa News

kalpa News

Next Post
ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL