ಕಲ್ಪ ಮೀಡಿಯಾ ಹೌಸ್ | ರಾಂಚಿ |
ಹಣೆಗೆ ಬಿಂದಿ ಧರಿಸಿ ಶಾಲೆಗೆ ಬಂದಿದ್ದ ಕಾರಣ ವಿದ್ಯಾರ್ಥಿನಿಯೊಬ್ಬಳನ್ನು ಶಿಕ್ಷಕಿ ಥಳಿಸಿದ ಕಾರಣದಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್’ನಲ್ಲಿ ನಡೆದಿದೆ.
ಇಲ್ಲಿನ ಧನ್ಭಾದ್’ನಲ್ಲಿ ಘಟನೆ ನಡೆದಿದ್ದು, ಈ ವಿಚಾರವನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೋ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿನಿಯೊಬ್ಬಳು ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದಕ್ಕೆ ಆಕೆಯನ್ನು ಥಳಿಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯ ಕುರಿತು ತನಿಖೆ ನಡೆಸಲು ಎನ್’ಸಿಪಿಸಿಆರ್ ತಂಡವು ಸ್ಥಳಕ್ಕೆ ತೆರಳಿದೆ ಎಂದು ತಿಳಿಸಿದ್ದಾರೆ.
Also read: ವರ್ಗಾವಣೆಗೆ ಜನಜಂಗುಳಿ, ಹಪ್ತಾ ವಸೂಲಿಗೆ ಒತ್ತಡ: ಬಸವರಾಜ ಬೊಮ್ಮಾಯಿ ಆರೋಪ
ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿ, ಪೊಲೀಸರು ತನಿಖೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಆರೋಪಿ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








