ಕಲ್ಪ ಮೀಡಿಯಾ ಹೌಸ್ | ತಿರುಪತಿ |
ಇಸ್ರೋ #ISRO ಹಾಗೂ ಭಾರತದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 #Chandrayana-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನಾದಿನವಾದ ಇಂದು ವಿಜ್ಞಾನಿಗಳ ತಂಡ ತಿರುಪತಿ #Tirupati ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಆಂಧ್ರಪ್ರದೇಶದಲ್ಲಿರುವ #AndraPradesh ತಿರುಪತಿ ತಿಮ್ಮಪ್ಪ ದೇವಾಲಯಕ್ಕೆ ಚಂದ್ರಯಾನ-3 ಉಪಗ್ರಹ ನೌಕೆಯ ಪ್ರತಿಕೃತಿಯೊಂದಿಗೆ ಇಸ್ರೋ ವಿಜ್ಞಾನಿಗಳ ತಂಡ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ.
ಈ ವೇಳೆ ದೇವಾಲಯದಲ್ಲಿ ಮಾತನಾಡಿದ ಇಸ್ರೋ ವೈಜ್ಞಾನಿಕ ಕಾರ್ಯದರ್ಶಿ ಶಂತನು ಭಟ್ವಾಡೇಕರ್ ನಮ್ಮ ಚಂದ್ರಯಾನ-3 ಮಿಷನ್ ನಾಳೆ ಉಡಾವಣೆಯಾಗಲಿದೆ. ಹೀಗಾಗಿ, ತಿರುಪತಿ ವೆಂಕಟಾಚಲಪತಿ ದೇವಾಲಯಕ್ಕೆ ನಮ್ಮ ತಂಡದೊಂದಿಗೆ ಭೇಟಿ ನೀಡಿ, ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದಿದ್ದಾರೆ.
#WATCH | "This is Chandrayaan-3 — our mission to the moon…We have a launch tomorrow," says the team of ISRO scientists after offering prayers at Tirupati Venkatachalapathy Temple in Andhra Pradesh. pic.twitter.com/xkQb1SuX4V
— ANI (@ANI) July 13, 2023
ನಾಳೆ ಉಡಾವಣೆ
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೆ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್ ಡೌನ್ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೊ ಮುಗಿಸಿದ್ದು, ಉಡ್ಡಯನಕ್ಕೆ ಅನುಮತಿ ನೀಡಿದೆ.
ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್’ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ #Sriharikota ಉಡಾವಣೆಗೊಳ್ಳಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್ ಮತ್ತು ರೋವರ್’ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್ ಆಗಸ್ಟ್’ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನಲ್’ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.
#WATCH | Andhra Pradesh | A team of ISRO scientists team arrive at Tirupati Venkatachalapathy Temple, with a miniature model of Chandrayaan-3 to offer prayers.
Chandrayaan-3 will be launched on July 14, at 2:35 pm IST from Satish Dhawan Space Centre, Sriharikota, ISRO had… pic.twitter.com/2ZRefjrzA5
— ANI (@ANI) July 13, 2023
ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು #Arbiter ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post