ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11ರಂದು ವಿಮಾನ ಹಾರಾಟ ಆರಂಭವಾಗಲಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ವೇಳೆ ನೀಡಿರುವ ಅಂಶಗಳು ಹಾಗೂ ಹೆಚ್ಚುವರಿ ಸೌಕರ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.
Also read: 3-4 ದಿನದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ: ಯಾರಿಗೆಲ್ಲಾ ಸಿಗುತ್ತೆ 2 ಸಾವಿರ? ಯಾವತ್ತು ಕಡೆಯ ದಿನ?
ಹಾರಾಟದ ಸಮಯವೇನು?
ಶಿವಮೊಗ್ಗ ವಿಮಾನ ನಿಲ್ದಾಣ ನಿರ್ದೇಶಕ ಕ್ಯಾಪ್ಟನ್ ಶಮಂತ್ ಮಾತನಾಡಿ, ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ. ಪಾಟೀಲ್ ರವರು ಆ.11 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಹೊರಟು ಬೆಳಿಗ್ಗೆ 11 ಕ್ಕೆ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 11.20 ಕ್ಕೆ ವಿಮಾನ ಪ್ರಯಾಣಿಕರೊಂದಿಗೆ ಶಿವಮೊಗ್ಗದಿಂದ ನಿರ್ಗಮಿಸಿ, ಮಧ್ಯಾಹ್ನ 12.15 ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಯೋಜನೆ ಇದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ (ಪ್ರಭಾರ) ಆರ್. ಮೇಘನಾ, ಶಿವಮೊಗ್ಗ ಎಸಿ ರವಿಚಂದ್ರನ್ನಾಯಕ್, ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರ ಸಂಪತ್ ಕುಮಾರ್ ಪಿಂಗಳೆ, ಪೊಲೀಸ್ ಪಡೆ ಅಸಿಸ್ಟೆಂಟ್ ಕಮಾಂಡೆAಟ್ ಚಂದ್ರಶೇಖರ್, ಕೆಎಸ್‌ಐಐಡಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು, ಗುತ್ತಿಗೆದಾರರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















