ಕಲ್ಪ ಮೀಡಿಯಾ ಹೌಸ್ | ಸೊರಬ |
ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳು ಸಾಕಷ್ಟಿದ್ದು, ಯಾವುದೇ ಸರ್ಕಾರದ ಅವಧಿಯಲ್ಲಿ ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯದಿರುವುದು ದುರ್ಧೈವದ ಸಂಗತಿಯಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ರಂಗಮಂದಿರದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಂಡ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಕರ ಕಾರ್ಯಗಾರ ಹಾಗೂ ವಾರ್ಷಿಕ ಮಹಾ ಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಕರ್ತವ್ಯದ ಅವಧಿಯಲ್ಲಿ ಶಿಕ್ಷಕರು ಅನಾವಶ್ಯಕವಾಗಿ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಕಚೇರಿಗಳಿಗೆ ಅಲೆಯುವುದು ಸಲ್ಲದು. ಸರ್ಕಾರ ನೀಡುವ ವೇತನಕ್ಕೆ ಬದ್ಧರಾಗಿ ನೌಕರರು ಕರ್ತವ್ಯ ನಿರ್ವಹಿಸಬೇಕಿದೆ. ಮಕ್ಕಳ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು. ಶೈಕ್ಷಣಿಕ ಕ್ಷೇತ್ರದಿಂದ ಮಾತ್ರವೇ ದೇಶದ. ಭವಿಷ್ಯವನ್ನು ಉಜ್ವಲಗೊಳಿಸಲು ಸಾಧ್ಯವಿದೆ ಎಂದರು.
Also read: ಶಿವಮೊಗ್ಗದ ಇಂಡಿಗೋ ವಿಮಾನದಲ್ಲಿ ಎಷ್ಟು ಸೀಟ್ ಇರುತ್ತವೆ? ಡೈಲಿ ಟೈಮಿಂಗ್ಸ್ ಏನು?
ಸರ್ಕಾರಿ ನೌಕರರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಗಣನೀಯವಾಗಿದೆ. ನಂಜುಂಡಪ್ಪ ವರದಿ ಪ್ರಕಾರ ತಾಲೂಕು ಹಿಂದುಳಿದಿದ್ದು, ಅನೇಕ ಸವಾಲುಗಳ ನಡುವೆ ಶಿಕ್ಷಕರು ಕರ್ತವ್ಯ ನಿರ್ವಹಿಸುವುದು ಶ್ಲಾಘನೀಯವಾಗಿದೆ. ಶಿಕ್ಷಕರ ಬಹುದಿನದ ಬೇಡಿಕೆಯಾಗಿದ್ದ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಕ್ಷೇತ್ರದವರೇ ಆದ ಎಸ್. ಮಧು ಬಂಗಾರಪ್ಪ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾಗಿರುವುದು ಅತ್ಯಂತ ಸಂತೋಷದ ವಿಷಯ. ಸಚಿವರಾಗಿ ಅಧಿಕಾರ ವಹಿಸಿಕೊಂಡ ಎರಡೇ ದಿನದಲ್ಲಿ ಶಿಕ್ಷಕರ ವರ್ಗಾವಣೆಗೆ ಮರು ಚಾಲನೆ ನೀಡಿರುವುದು ಶಿಕ್ಷಕ ವರ್ಗ ಸ್ವಾಗತಿಸುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪ್ರಕಾಶ್ ಮಡ್ಲೂರ್ ಮಾತನಾಡಿದರು.
ಶಿಕ್ಷಣ ಮತ್ತು ಶಿಕ್ಷಕ ಪ್ರಸ್ತುತ ಸವಾಲುಗಳ ಕುರಿತು ಹೊಸನಗರ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಪತಿ ಹಳಗುಂದ ಉಪನ್ಯಾಸ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಸಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ತಾಪಂ ಇಒ ಡಾ. ಪ್ರದೀಪ್ ಕುಮಾರ್, ಬಿಇಒ ಟಿ.ಎಂ. ಸತ್ಯನಾರಾಯಣ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರುದ್ರಪ್ಪ, ಪ್ರಮುಖರಾದ ಜಿ. ಸುಮತಿ, ಆರ್. ಮೋಹನ್ ಕುಮಾರ್, ದಯಾನಂದ ಕಲ್ಲೇರ್, ಎಂ. ಮನೋಹರ್, ಲಿಂಗರಾಜ ಒಡೆಯರ್, ಕುಮಾರ್, ಚಿತ್ರಾ, ಎಲ್. ಸತ್ಯನಾರಾಯಣ, ಎಸ್. ಚಂದ್ಯಾನಾಯ್ಕ್, ಶಫೀ ಅಹಮದ್ ಸೇರಿದಂತೆ ಇತರರಿದ್ದರು. ಸುನಂದಾ ಮತ್ತು ಸಂಗಡಿಗರು ಪ್ರಾರ್ಥಿಸಿದರು.
ವರದಿ: ಮಧು ರಾಮ್ ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post