ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಖಾರವಾಗಿ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು; ಅನಾಹುತ ಆಗುವ ಮುನ್ನವೇ ಶಂಕಿತ ಭಯೋತ್ಪಾದಕರನ್ನು ಹಿಡಿದಿರುವ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

Also read: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ ಆತಂಕ
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅವರು ಸರಕಾರಕ್ಕೆ ಸಲಹೆ ಮಾಡಿದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)










Discussion about this post