ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಆತನ ಮನೆಯ ಮುಂದೆಯೇ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ #Murder ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಕೊಲೆಯಾದವನನ್ನು ರೌಡಿ ಶೀಟರ್ ಮುಜಾಹಿದ್ದೀನ್(32) ಎಂದು ಗುರುತಿಸಲಾಗಿದೆ.
ನಿನ್ನೆ ತಡರಾತ್ರಿ ಅಂದಾಜು 12.30ರ ವೇಳೆಯಲ್ಲಿ ಮನೆಯಿಂದ ಹೊರ ಬಂದಿದ್ದ ಮುಜಾಹಿದ್ದೀನ್ ಮೇಲೆ ಭೀಕರವಾಗಿ ದಾಳಿ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.
Also read: ಕಲಾಪದಿಂದ 10 ಬಿಜೆಪಿ ಶಾಸಕರ ಅಮಾನತು: ಎಸ್. ದತ್ತಾತ್ರಿ ಖಂಡನೆ
ಹತ್ಯೆಯಾಗಿರುವ ಮುಜಾಹಿದ್ದೀನ್ ರೌಡಿ ಶೀಟರ್ ಆಗಿದ್ದು, ಹಿಂದೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















